ಜ.1: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಕಾವಳಮೂಡೂರು ಎನ್. ಸಿ. ರೋಡ್ 10 ನೇ ಶಾಖೆ ಉದ್ಘಾಟನೆ

0


ಬಂಟ್ವಾಳ : ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಸಜೀಪಮೂಡ ಇದರ 10ನೇ ಶಾಖೆ ಕಾವಳಮೂಡೂರು ಗ್ರಾಮದ ಎನ್.ಸಿ. ರೋಡಿನಲ್ಲಿರುವ ಎಮ್.ಎಮ್. ಕಾಂಪ್ಲೆಕ್ಸ್‌ನಲ್ಲಿ ಜ.1 ರಂದು ಆದಿತ್ಯವಾರ ಬೆಳಿಗ್ಗೆ 10ಕ್ಕೆ ಕಾವಳಮೂಡೂರು ಶಾಖೆ ಉದ್ಘಾಟನೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ತಿಳಿಸಿದ್ದಾರೆ.

10ನೇ ಶಾಖೆಯನ್ನು ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಉದ್ಘಾಟಿಸುವರು. ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸುವರು. ಕರದಾಳದ ಬ್ರಹ್ಮಶ್ರೀ ನಾರಾಯಣ ಗುರುಗಳ ಶಕ್ತಿ ಪೀಠದ ಡಾ. ಶ್ರೀ ಪ್ರಣವಾನಂದ ಸ್ವಾಮೀಜಿ ಆಶೀರ್ವಚನಗೈಯ್ಯುವರು.
ಗಣಕ ಯಂತ್ರವನ್ನು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಂ. ತುಂಗಪ್ಪ ಬಂಗೇರ ಉದ್ಘಾಟಿಸುವರು. ಕಕ್ಯಪದವು ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್ ಭದ್ರತಾ ಕೊಠಡಿಯನ್ನು ಉದ್ಘಾಟಿಸುವರು. ಕಾವಳಮೂಡೂರು ಗ್ರಾ.ಪಂ. ಅಧ್ಯಕ್ಷೆ ಜಯಲಕ್ಷ್ಮಿ ದೇವಾಡಿಗ ಠೇವಣಿ ಪತ್ರ ಬಿಡುಗಡೆಗೊಳಿಸುವರು.
ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶ್ರೀ ಗುರು ವಿವಿಧೋದ್ದೇಶ ಸಹಕಾರಿ ಸಂಘ ನಿ. ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ, ಜಿ.ಪಂ. ಮಾಜಿ ಸದಸ್ಯ ಪದ್ಮಶೇಖರ್ ಜೈನ್ ಬಲ್ಲೋಡಿಗುತ್ತು, ಕಾವಳಪಡೂರು ಗ್ರಾ.ಪಂ. ಉಪಾಧ್ಯಕ್ಷ ಚಂದ್ರಶೇಖರ್ ಮದ್ವ, ಕಾವಳಕಟ್ಟೆ ಜುಮ್ಮಾ ಮಸೀದಿ ಅಧ್ಯಕ್ಷ ಹಸನ್ ಸಾಹೇಬ್, ಭಾಗವಹಿಸುವರು.
ಎಂದು ಪ್ರಕಟನೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here