ಸ.ಪ್ರೌಢಶಾಲೆ ಕಡೇಶಿವಾಲಯದ ಯಶವಂತರವರ ವಿಜ್ಞಾನ ಮಾದರಿ, ದಕ್ಷಿಣ ಭಾರತ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಧಾರವಾಡದ ರಾಯಪುರದಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಕಡೇಶಿವಾಲಯ ಸರಕಾರಿ ಪ್ರೌಢಶಾಲೆಯ 10 ನೇ ತರಗತಿ ವಿದ್ಯಾರ್ಥಿ ಯಶವಂತರವರು ಬಹು ಉಪಯೋಗಿ ಕೃಷಿ ಯಂತ್ರದ ಅನ್ವೇಷಣೆಯ ಮಾದರಿಯಲ್ಲಿ ವಿಜೇತರಾಗಿ ಕೇರಳದ ತ್ರಿಶೂರ್‌ನಲ್ಲಿ ಜ.27ರಿಂದ 31ರವರೆಗೆ ನಡೆಯುವ ದಕ್ಷಿಣ ಭಾರತ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿದ್ದಾರೆ.

ಬಂಟ್ವಾಳ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪ್ರಥಮ ಹಾಗೂ ಬಂಟ್ವಾಳ ಮೊಡಂಕಾಪು ಕಾರ್ಮೆಲ್ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪ್ರಥಮ ಸ್ಥಾನ ಗಳಿಸಿದ್ದರು. ಇವರಿಗೆ ಗಣಿತ ಶಿಕ್ಷಕಿ ಗೀತಾಕುಮಾರಿ ಮಾರ್ಗದರ್ಶನ ನೀಡಿದ್ದಾರೆ. ಇವರು ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ಕೆಮ್ಮಾನು ನಿವಾಸಿ ಲೋಕೇಶ ಮತ್ತು ಪವಿತ್ರ ದಂಪತಿಯ ಪುತ್ರರಾಗಿದ್ದಾರೆ.

ಈವರ ಈ ಸಾಧನೆಗೆ ಶಾಲಾ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here