ಪುತ್ತೂರು: ಪುತ್ತೂರಿನ ಹೃದಯ ಭಾಗದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿಕೊಂಡು ಕೌಡಿಚ್ಚಾರು, ಬೆಳ್ಳಾರೆ, ಗುರುವಾಯನಕೆರೆ, ಮಾಣಿ, ವಿಟ್ಲ, ಕುಡ್ತಮುಗೇರು, ಉಪ್ಪಿನಂಗಡಿ, ಬಿ.ಸಿ.ರೋಡ್, ಮೆಲ್ಕಾರು, ಬೆಳ್ತಂಗಡಿ, ಸಿದ್ದಕಟ್ಟೆ, ಮುಡಿಪು, ಫರಂಗಿಪೇಟೆ ಕಡೆಗಳಲ್ಲಿ ಈಗಾಗಲೇ ಒಟ್ಟು ೧೪ ಶಾಖೆಗಳ ಮುಖಾಂತರ ಸದಸ್ಯರಿಗೆ ಸೇವೆ ನೀಡುತ್ತಾ ಬಂದಿರುವ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮಾಣಿ ಶಾಖೆಯ ಕುಂಭಶ್ರೀ ಸಹಕಾರ ಭವನ ಕಟ್ಟಡ ಜ.೧೪ರಂದು ಲೋಕಾರ್ಪಣೆಗೊಳ್ಳಲಿದೆ.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಮೈಸೂರು ಇದರ ನಿರ್ದೇಶಕ ಮಂಜಪ್ಪ ಅವರು ನೂತನ ಕುಂಭಶ್ರೀ ಸಹಕಾರ ಭವನವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಲಿಪಾಡಿಗುತ್ತು ಮಾರಾಟ ಮಳಿಗೆಯನ್ನು ಉದ್ಘಾಟಿಸಲಿದ್ದಾರೆ. ಶಾಸಕ ಸಂಜೀವ ಮಠಂದೂರು ಅವರು ಗಣಕಯಂತ್ರವನ್ನು ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಕುಂಬಾರ ಗುಡಿ ಕೈಗಾರಿಕ ಸಹಕಾರ ಸಂಘದ ಅಧ್ಯಕ್ಷ ಭಾಸ್ಕರ್ ಎಂ.ಪೆರುವಾಯಿ ಅಧ್ಯಕ್ಷತೆ ವಹಿಸಲಿದ್ದಾರೆ. ಉಳ್ಳಾಲ ಶಾಸಕ ಯು.ಟಿ.ಖಾದರ್, ಮಂಗಳೂರು ನಗರ ಉತ್ತರದ ಶಾಸಕ ಭರತ್ ವೈ ಶೆಟ್ಟಿ, ಕೆ.ವಿ.ಜಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಡಾ. ರೇಣುಕಾ ಪ್ರಸಾದ್ ಕೆ.ವಿ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಸಹಿತ ಅನೇಕ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.