ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಕಾರ್ಯಾಗಾರ

0

ಬಂಟ್ವಾಳ : ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಬಗ್ಗೆ ಪ್ರೇರೇಪಣಾ ಕಾರ್ಯಗಾರ ಜ.13ರಂದು ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮಪಂಚಾಯತ್‌ ನಲ್ಲಿ ನಡೆಯಿತು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದ.ಕ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ -2 ಗ್ರಾಮ್ಸ್ ಮಂಗಳೂರು ಇದರ ಸಹಯೋಗದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಈ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಹಿರನ್ಮಯಿ ,ಉಪಾಧ್ಯಕ್ಷೆ ಜ್ಯೋತಿ , ಪಂಚಾಯತ್ ಸದಸ್ಯರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಸ್ವ ಸಹಾಯ ಸಂಘದ ಸದಸ್ಯರು, ಗ್ರಾಮಸ್ಥರು ಸೇರಿದಂತೆ ಹಲವರು ಭಾಗವಹಿಸಿದ್ದರು.

ಜಲ ಜೀವನ್ ಮಿಷನ್ ನ ಅನುಷ್ಠಾನ ಬೆಂಬಲ ಸಂಸ್ಥೆಯ ಸಿಬ್ಬಂದಿ ಗುಣವತಿ ಹಾಗು ವಿಲ್ಮ ಮಳೆ ನೀರು ಕೊಯ್ಲು ಘಟಕ ಮತ್ತು ಬೂದುನೀರು ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here