ಶ್ರೀ ಗಾಯತ್ರೀ ದೇವಿ ದೇಗುಲದ ಜೀರ್ಣೋದ್ಧಾರ ಕಾಮಗಾರಿ ವೀಕ್ಷಿಸಿದ ಮಾಜಿ ಸಚಿವ ರಮಾನಾಥ ರೈ

0

ಬಂಟ್ವಾಳ: ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಎಂಬಲ್ಲಿನ ಶ್ರೀ ಗಾಯತ್ರಿ ದೇವಿ ದೇವಸ್ಥಾನಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಶುಕ್ರವಾರ ಭೇಟಿ ನೀಡಿ ಜೀರ್ಣೋದ್ಧಾರ ಕಾಮಗಾರಿ ವೀಕ್ಷಿಸಿದರು.ಸುಮಾರು 1ಕೋ.ರೂ ವೆಚ್ಚದಲ್ಲಿ ಜೀರ್ಣೋದ್ದಾರ ಕಾಮಗಾರಿ ನಡೆಯುತ್ತಿದ್ದು ಫೆ.8ರಿಂದ 10ರತನಕ ಬ್ರಹ್ಮಕಲಶೋತ್ಸವ ನಡೆಯಲಿದೆ.


ಕಳೆದ 2006ರಲ್ಲಿ ಗರ್ಭಗುಡಿ ನಿರ್ಮಿಸಿ ದೇವರ ವಿಗ್ರಹ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ನಡೆದಿತ್ತು. ಈಗ ಸುತ್ತುಗೋಪುರ ನಿರ್ಮಾಣ ಸಹಿತ ಗಣಪತಿ ಗುಡಿ, ಗುರು ರಾಘವೇಂದ್ರ ಸ್ವಾಮಿ ಗುಡಿ ಮತ್ತು ಪರಿವಾರ ದೈವಗಳಿಗೆ ಗುಡಿ ನಿರ್ಮಾಣಗೊಂಡಿದ್ದು,ಗ್ರಾಮ ಪಂಚಾಯಿತಿ ವತಿಯಿಂದ ಸುಸಜ್ಜಿತ ಶೌಚಾಲಯ ನಿರ್ಮಾಣಗೊಳ್ಳುತ್ತಿದೆ. ಬ್ರಹ್ಮಕಲಶೋತ್ಸವಕ್ಕೆ ಕೈಲಾದ ನೆರವು ನೀಡುವುದಾಗಿ ರಮಾನಾಥ ರೈ ಭರವಸೆ ನೀಡಿದ್ದಾರೆ.


ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಬಿ.ಪದ್ಮಶೇಖರ ಜೈನ್, ಹೊರೆಕಾಣಿಕೆ ಸಮಿತಿ ಅಧ್ಯಕ್ಷ ವೀರೇಂದ್ರ ಅಮೀನ್, ಪ್ರಮುಖರಾದ ಬೇಬಿ ಕುಂದರ್, ಕರ್ಣ ಚಂದ್ರಶೇಖರ್, ಪ್ರಭಾಕರ ಪೂಜಾರಿ, ಅಭಿಷೇಕ್ ಗಾಣಿಗ ಮತ್ತಿತರರ ಜೊತೆ ಕಾಮಗಾರಿಗಳನ್ನು ವೀಕ್ಷಿಸಿದ ಮಾಜಿ ಸಚಿವ ರಮಾನಾಥ ರೈ ಅವರಿಗೆ ಕ್ಷೇತ್ರದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಜನಿ ಬಾಬು ಕುಲಾಲ್ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ಮಾಹಿತಿ ನಿಡಿದರು.

LEAVE A REPLY

Please enter your comment!
Please enter your name here