ಬಂಟ್ವಾಳ: ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಜನವರಿ 26ನೇ ದಿನಾಂಕದಂದು ಆಚರಿಸಲಾಗುವ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನದ ಪಿತಾಮಹ, ಭಾರತರತ್ನ ಡಾ|| ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಟ್ಟು ಸಮಾರಂಭವನ್ನು ಆಚರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.