ವಿಟ್ಲ: ಕೃಷಿಕರೊಬ್ಬರು ಅಡಿಕೆ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ವಿಟ್ಲ ಮುಡ್ನೂರು ಗ್ರಾಮದ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ನಿವಾಸಿ ಹರೀಶ್ (53 ವ.) ಮೃತ ದುರ್ದೈವಿ.
ತನ್ನ ತೋಟದಲ್ಲಿ ಕೃಷಿ ಯಂತ್ರದ ಮೂಲಕ ಅಡಿಕೆ ತೆಗಿಯುವಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ ಲೀಲಾ, ಪುತ್ರರಾದ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ವಿಶ್ವರಾಜ್ ಹಾಗೂ ವಿನೋದ್ ರಾಜ್‌ನನ್ನು ಅಗಲಿದ್ದಾರೆ.