ಬಂಟ್ವಾಳ: ಬಿ ಸಿ ರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಂಭಾಗದಲ್ಲಿರುವ ಪ್ರೀತಂ ಎಂಬವರಿಗೆ ಸೇರಿದ ಪ್ರಿಯಾ ಎಲೆಕ್ಟ್ರಾನಿಕ್ಸ್ ಮೇಲಿನ ಅಂತಸ್ತಿನಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ.
ಎಲೆಕ್ಟ್ರಾನಿಕ್ಸ್ ಜೊತೆಗೆ ಕೊಮಾಕಿ ಕಂಪೆನಿಗೆ ಸೇರಿದ ದ್ವಿಚಕ್ರ ವಾಹನಗಳ ದಾಸ್ತಾನು ಇರಿಸಲಾಗಿರುವ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಇದರ ಬ್ಯಾಟರಿ ಸ್ಪೋಟಗೊಂಡು ಬೆಂಕಿ ಹಚ್ಚಿಕೊಂಡಿದೆಯಾ ಎಂಬ ಸಂಶಯ ವ್ಯಕ್ತವಾಗಿದೆ. ಸಾರ್ವಜನಿಕರು ಅಗ್ನಿಶಾಮಕ ದಳದ ಮಾಹಿತಿ ನೀಡಿದ್ದುಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕದಳದ ಸಿಬ್ಬಂದಿಗಳು ,ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬಂಟ್ವಾಳ ನಗರ ಠಾಣಾ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.