ದಕ್ಷಿಣ ಭಾರತ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ- ಕಡೇಶಿವಾಲಯ ಸ.ಪ್ರೌಢಶಾಲೆಯ ಯಶವಂತ್ ತೃತೀಯ

0

‌ಕಡೇಶಿವಾಲಯ: ತ್ರಿಶೂರ್ ಜ.27ರಿಂದ 31ರವರೆಗೆ ನಡೆದ ದಕ್ಷಿಣ ಭಾರತ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಬಹು ಉಪಯೋಗಿ ಕೃಷಿ ಯಂತ್ರದ ಅನ್ವೇಷಣೆಯ ಮಾದರಿಯಲ್ಲಿ ಕಡೇಶಿವಾಲಯ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಯಶವಂತ್ ತೃತೀಯ ಸ್ಥಾನ ಪಡೆದು ಸಾಧನೆಗೈದಿದ್ದಾರೆ.

ಬಂಟ್ವಾಳ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪ್ರಥಮ ಹಾಗೂ ಬಂಟ್ವಾಳ ಮೊಡಂಕಾಪು ಕಾರ್ಮೆಲ್ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪ್ರಥಮ ಸ್ಥಾನ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಧಾರವಾಡದ ರಾಯಪುರದಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿಜೇತರಾಗಿದ್ದರು.

ಇವರಿಗೆ ಗಣಿತ ಶಿಕ್ಷಕಿ ಗೀತಾ ಕುಮಾರಿ ಮಾರ್ಗದರ್ಶನ ನೀಡಿದ್ದಾರೆ. ಇವರು ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ಕೆಮ್ಮಾನು ನಿವಾಸಿ ಲೋಕೇಶ್ ಮತ್ತು ಪವಿತ್ರ ದಂಪತಿಯ ಪುತ್ರರಾಗಿದ್ದಾರೆ.

LEAVE A REPLY

Please enter your comment!
Please enter your name here