ಬೆಂಗಳೂರು:ಅಂಗನವಾಡಿ ಸಿಬ್ಬಂದಿಗೆ ಗ್ರಾಚ್ಯುಟಿ ಸೌಲಭ್ಯ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ. ೨೦೨೩-೨೪ನೇ ಸಾಲಿನ ಆರ್ಥಿಕ ವರ್ಷದಿಂದ ಜಾರಿಗೆ ಬರುವಂತೆ ಗ್ರಾಚ್ಯುಟಿ ನೀಡಲು ಆಡಳಿತಾತ್ಮಕ ಅನುಮತಿ ನೀಡಿದೆ.ಗ್ರಾಚ್ಯುಟಿ ಮೊತ್ತ ಹಾಗೂ ಲೆಕ್ಕ ಹಾಕುವ ವಿಧಾನಗಳನ್ನು ಒಳಗೊಂಡ ಮಾರ್ಗಸೂಚಿಯನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶದಲ್ಲಿ ತಿಳಿಸಿದೆ.ಈ ಸಂಬಂಧ ಗುರುವಾರ ಬೆಳಿಗ್ಗೆ ಸಚಿವ ಹಾಲಪ್ಪ ಆಚಾರ್ ಅವರು ಅಂಗನವಾಡಿ ನೌಕರರ ಸಂಘದ ಪ್ರಮುಖರೊಂದಿಗೆ ಸಭೆ ನಡೆಸಿದ್ದರು.ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಹಂತ ಹಂತವಾಗಿ ಆದೇಶ ಹೊರಡಿಸಲಾಗುವುದು. ಗ್ರಾಚ್ಯುಟಿ ಜತೆಗೆ ಕನಿಷ್ಠ ವೇತನ ನೀಡಬೇಕು ಎಂಬ ಬೇಡಿಕೆ ಬಗ್ಗೆ ಮುಖ್ಯಮಂತ್ರಿ ಅವರ ಜತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದರು.