ಬಂಟ್ವಾಳ: ರೈಲ್ವೆ ಓವರ್ ಬ್ರಿಡ್ಜ್‌‌ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

0

ಬಂಟ್ವಾಳ: ಬಿಸಿರೋಡಿನ ಮುಖ್ಯ ವೃತ್ತದ ಬಳಿ ರೈಲ್ವೆ ಓವರ್ ಬ್ರಿಡ್ಜ್‌‌ನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಫೆ.3 ರಂದು ಪತ್ತೆಯಾಗಿದೆ.ಸುಮಾರು 55 ಪ್ರಾಯದ ಅಪರಿಚಿತ ವ್ಯಕ್ತಿ ಮಲಗಿರುವ ಸ್ಥಿತಿಯಲ್ಲಿಯೇ ಸಾವನ್ನಪ್ಪಿರುವುದು ಪತ್ತೆಯಾಗಿದೆ. ಫೆ.2 ರಂದು ಗುರುವಾರ ಈ ಅಪರಿಚಿತ ವ್ಯಕ್ತಿ ಅಮಲು ಪದಾರ್ಥ ಸೇವಿಸಿ ಮಲಗಿದ್ದ ಎನ್ನಲಾಗಿದೆ. ಸಾರ್ವಜನಿಕರು ಮೃತದೇಹವನ್ನು ನೋಡಿ ಪೋಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಬಂಟ್ವಾಳ ‌ನಗರ ಠಾಣಾ ಎಸ್. ಐ.ರಾಮಕೃಷ್ಣ ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸಿದ ಬಳಿಕ ಶವವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

LEAVE A REPLY

Please enter your comment!
Please enter your name here