ವಾಮದಪದವು ಕಾಲೇಜಿನ ಅತಿಥಿ ಉಪನ್ಯಾಸಕಿ ನೇಣು ಬಿಗಿದು ಆತ್ಮಹತ್ಯೆ

0

ಬಂಟ್ವಾಳ: ವಾಮದಪದವು ಕಾಲೇಜೊಂದರ ಅತಿಥಿ ಉಪನ್ಯಾಸಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿಯ ಕೋಡಿ ಎಂಬಲ್ಲಿ ನಡೆದಿದೆ. 34 ವರ್ಷದ ಅಮಿತಾ ಆತ್ಮಹತ್ಯೆ ಮಾಡಿಕೊಂಡವರು.

12 ವರ್ಷಗಳ ಹಿಂದೆ ವಿವಾಹವಾಗಿರುವ ಅಮಿತಾ ಅವರಿಗೆ ಒಂದು ಹೆಣ್ಣು ಮಗು ಇದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ಬೆಡ್‌ ರೂಮಿನ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಯಾವುದೇ ಕಾರಣ ತಿಳಿದು ಬಂದಿಲ್ಲ. ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here