ಬಂಟ್ವಾಳ : ತಲೆಮರೆಸಿಕೊಂಡಿದ್ದ ಆರೋಪಿ ಸೆರೆಸಿಕ್ಕ

0

ಬಂಟ್ವಾಳ:ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಸುಮಾರು 2 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೂ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಮಿತ್ತ ಪಡ್ಪು ಮನೆ ಸಜಿಪನಡು ಗ್ರಾಮದ ಅಫ್ರೀದಿ ಎಂಬಾತನನ್ನು ಬಂಧಿಸಿದ್ದಾರೆ.

ವಾರೆಂಟ್ ಜಾರಿಯಾಗಿ 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಈತನನ್ನು ಬಂಟ್ವಾಳದಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ಇಂದು ಬೆಳಿಗ್ಗೆ ದಸ್ತಗಿರಿ ಮಾಡಲಾಗಿದ್ದು, ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಅ ಕ್ರ 05/2020 ಕಲಂ 341,324,504 ನೇದರಲ್ಲಿ ಆರೋಪಿಯಾದ ಮಿತ್ತ ಪಡ್ಪು ಮನೆ ಸಜಿಪನಡು ಗ್ರಾಮದ ಅಫ್ರೀದಿ ಎಂಬಾತ ವಾರೆಂಟ್ ಜಾರಿಯಾಗಿ ತಲೆಮರೆಸಿಕೊಂಡಿದ್ದ.

LEAVE A REPLY

Please enter your comment!
Please enter your name here