ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನಲೆ: ಸಾರಡ್ಕ, ಸಾಲೆತ್ತೂರು ಚೆಕ್‌ಪೋಸ್ಟ್‌ಗಳಲ್ಲಿ ಬಿಗು ತಪಾಸಣೆ

0

ವಿಟ್ಲ: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರುರವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕಡಿದು ಹತ್ಯೆಗೈದ ಹಿನ್ನೆಲೆ ಘಟನೆ ನಡೆದ ಕೂಡಲೇ ಕೇರಳ ಕರ್ನಾಟಕ ಗಡಿಪ್ರದೇಶಗಳಾದ ಸಾರಡ್ಕ, ಕನ್ಯಾನ, ಸಾಲೆತ್ತೂರು ಚೆಕ್ ಪೋಸ್ಟ್ ಗಳಲ್ಲಿ ವಿಟ್ಲ ಠಾಣಾ ಇನ್ಸ್‌ ಪೆಕ್ಟರ್ ಹೆಚ್.ಈ. ನಾಗರಾಜ್ ರವರ ನೇತೃತ್ವದ ಪೊಲೀಸರಿಂದ ವಾಹನ ತಪಾಸಣೆ ಬಿಗುಗೊಳಿಸಲಾಗಿದೆ. ಕರ್ನಾಟಕಕ್ಕೆ ಆಗಮಿಸುವ ಹಾಗೂ ಕೇರಳಕ್ಕೆ ತೆರಳುವ ವಾಹನಗಳ ಬಗ್ಗೆ ತೀವ್ರ ನಿಗಾ ಇರಿಸಲಾಗುತ್ತಿದೆ‌. ಮಾತ್ರವಲ್ಲದೆ ಇಡೀ ಠಾಣಾ ವ್ಯಾಪ್ತಿಯಲ್ಲಿ ಗಸ್ತು ತಿರುಗುವ ಮೂಲಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಪೇಟೆ ಪ್ರದೇಶದಲ್ಲಿ ಮೆಡಿಕಲ್, ಸರಕಾರಿ ಕಚೇರಿಗಳನ್ನು ಹೊರತು ಪಡಿಸಿ ಉಳಿದೆಲ್ಲಾ ಅಂಗಡಿಗಳು ಮುಚ್ಚಲ್ಪಟ್ಟಿವೆ. ವಾಹನ ಸಂಚಾರ ವಿರಳವಾಗಿದ್ದು, ಜನಸಂಚಾರ ಕಡಿಮೆಯಾಗಿದೆ. ಉಳಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಎಂದಿನಂತೆ ಅಂಗಡಿ ಮುಂಗಟ್ಟುಗಳು ತೆರೆದಿದ್ದು, ವಾಹನ ಸಂಚಾರ ನಡೆಯುತ್ತಿದೆ.

LEAVE A REPLY

Please enter your comment!
Please enter your name here