ಫೆ.26: ನರಿಕೊಂಬು- ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಉಚಿತ ಕಣ್ಣಿನ ಮತ್ತು ದಂತ ತಪಾಸಣೆ ಶಿಬಿರ

0

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬಂಟ್ವಾಳ ತಾಲೂಕು, ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ನರಿಕೊಂಬು ಎ,ನರಿಕೊಂಬು ಬಿ,ಹಾಗೂ ನಂದವರ ಒಕ್ಕೂಟ, ಸೇವಾಂಜಲಿ ಪ್ರತಿಷ್ಠಾನ ಪರಂಗಿಪೇಟೆ,ರೋಟರಿ ಕ್ಲಬ್ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ಜಸ್ಟಿಸ್ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಎ ಬಿ ಶೆಟ್ಟಿ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸಯನ್ಸ್ ದೇರಳಕಟ್ಟೆ ಇದರ ಸಹಯೋಗದೊಂದಿಗೆ “ಉಚಿತ ಕಣ್ಣಿನ ಹಾಗೂ ದಂತ ತಪಾಸಣೆ ಶಿಬಿರ” ಫೆ.26 ಆದಿತ್ಯವಾರ ಬೆಳಿಗ್ಗೆ ಗಂಟೆ 10 ರಿಂದ ಮಧ್ಯಾಹ್ನ 1 ತನಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ನಡೆಯಲಿದೆ.


ನರಿಕೊಂಬು,ಶಂಭುರು,ಪಾಣೆಮಂಗಳೂರು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಎಂದು ಗ್ರಾಮಾಭಿವೃದ್ಧಿ ಯೋಜನೆಯ ತುಂಬೆ ವಲಯ ಮೇಲ್ವಿಚಾರಕಿ ಶ್ರೀಮತಿ ಮಮತಾ ಸಂತೋಷ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕಾರ್ಯಕ್ರಮದ ಉದ್ಘಾಟನೆಯನ್ನು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಸಂಚಯಗಿರಿ ಬಿ ಸಿ ರೋಡ್ ಇದರ ಅಧ್ಯಕ್ಷ ಪ್ರೊಫೆಸರ್ ತುಕರಾಮ ಪೂಜಾರಿ ನೆರವೇರಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯದ ವಲಯ ಅಧ್ಯಕ್ಷೆ ಲೀಡಿಯೋ ಪಿಂಟೋ ವಹಿಸಲಿರುವರು.

ಕಾರ್ಯಕ್ರಮದಲ್ಲಿ ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿನೀತ ಪುರುಷೋತ್ತಮ್, ನರಿಕೊಂಬು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿಅಂಚನ್, ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯನಂದ ಪಿ, ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಪುಷ್ಪರಾಜ್ ಹೆಗ್ಡೆ, ಸೇವಾಂಜಲಿ ಪ್ರತಿಷ್ಠಾನ ಪರಂಗಿಪೇಟೆ ಇದರ ಆಡಳಿತ ಟ್ರಸ್ಟಿ ಕೆ ಕೃಷ್ಣಕುಮಾರ್ ಪೂಂಜ, ಪ್ರಗತಿಪರ ಕೃಷಿಕ ಪ್ರೇಮನಾಥ ಶೆಟ್ಟಿ ಅಂತರ, ನರಿಕೊಂಬು ಏ ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಸಪಲ್ಯ , ನರಿಕೊಂಬು ಬಿ ಒಕ್ಕೂಟ ಅಧ್ಯಕ್ಷ ಜಯಂತ್ , ನಂದವರ ಒಕ್ಕೂಟ ಅಧ್ಯಕ್ಷ ಸುರೇಶ್ ಮೊದಲಾದವರು ಉಪಸ್ಥಿತ ಇರುವರು

LEAVE A REPLY

Please enter your comment!
Please enter your name here