ಬಂಟ್ವಾಳ ತಾಲೂಕಿನ ಬಡಗಕಜೆಕಾರು ರಸ್ತೆ ಅವ್ಯವಸ್ಥೆ: ಸರಿಪಡಿಸಲು ಒತ್ತಾಯ

0

ಬಂಟ್ವಾಳ: ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾಮದ ರಸ್ತೆ ದುರಸ್ತಿ ಪಡಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.‌ ಬಡಗಕಜೆಕಾರು ಗ್ರಾಮದ ಪಾಂಡವರಕಲ್ಲುವಿನಿಂದ ಅಂಬ್ಡೇಲು, ಐಂಬಲೊಡಿ, ಪಿತ್ತಿಲಬೆಟ್ಟು, ಮಡಾವು, ಬಡಕಬೈಲು, ಉರಿಯೊಟ್ಟು ಹಾಗು ಬಿಜಿಲ ಬಸದಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದೆ.

ಇಷ್ಟರವರೆಗೆ ಯಾವುದೇ ಜನಪ್ರತಿನಿಧಿಗಳು, ಹಾಗೂ ಯಾವ ಪಕ್ಷದವರೂ ಈ ರಸ್ತೆಯ ಬಗ್ಗೆ ಗಮನ ಹರಿಸಿಲ್ಲ. ವಯೋವೃದ್ಧರು, ಅಂಗವಿಕಲರು, ಗರ್ಭಿಣಿಯರು ಹಾಗೂ ಶಾಲಾ ಮಕ್ಕಳಿಗೆ ಈ ರಸ್ತೆಯಲ್ಲಿ ಓಡಾಡುವುದು ತುಂಬಾ ಕಷ್ಟವಾಗಿದೆ. ಹಲವಾರು ಸಮಯಗಳಿಂದ ಈ ಬಗ್ಗೆ ಸಂಬಂಧಪಟ್ಟವರಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ.‌ ಇನ್ನಾದರೂ ಇತ್ತ ಚಿತ್ತ ಹರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here