ಬಂಟ್ವಾಳ: ತುಂಬೆ ಗ್ರಾಮದ ರಾಮಲ್ ಕಟ್ಟೆ ಎಂಬಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದ್ವಿಚಕ್ರ ವಾಹನ ಸವಾರ ತಿಮ್ಮಪ್ಪ ಅವರು ಚಿಕಿತ್ಸೆ ಫಲಕಾರಿಯಾಗದೆ ಫೆ.27ರಂದು ರಾತ್ರಿ ಮೃತಪಟ್ಟಿರುತ್ತಾರೆ.
ಫೆ.27ರಂದು ಸಂಜೆ ರಾಮಲಕಟ್ಟೆಯಲ್ಲಿ ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಕಾರು ಚಾಲಕ ವಾಹನವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಅದೇ ಮಾರ್ಗವಾಗಿ ಮಂಗಳೂರು ಕಡೆ ಸಂಚರಿಸುತ್ತಿದ್ದ ಸ್ಕೂಟರ್ ಗೆ ಕಾರು ಢಿಕ್ಕಿಯಾದ ಪರಿಣಾಮ ಸವಾರ ತಿಮ್ಮಪ್ಪ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು.
ತಕ್ಷಣ ಸ್ಥಳೀಯರು ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿದರಾದರೂ ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ಮೃತಪಟ್ಟಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.