ಬಂಟ್ವಾಳ : ಮಾರ್ಚ್ 12ರಂದು ಮಿತ್ತೂರು ಜಂಕ್ಷನ್ ನಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಪ್ರತಿಭಟನೆಯಲ್ಲಿ ಭಾಷಣ ಮಾಡಿ ಶಾಂತಿ ಸೌಹಾರ್ದತೆಗೆ ಧಕ್ಕೆ ತಂದಿರುವುದಾಗಿ ಆರೋಪಿಸಿ ಹಿಂದೂ ಸಂಘಟನೆಯೊಂದರ ಮುಖಂಡರ ವಿರುದ್ದ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಾಣಿ ನರಸಿಂಹ ಎಂಬುವವರು ಕೆದಿಲ ಗ್ರಾಮದ ಪಾಟ್ರಕೋಡಿಯಲ್ಲಿ ತಮ್ಮ ಭಾಷಣದಲ್ಲಿ ನೀಡಿದ ಹೇಳಿಕೆ ಭಾರೀ ವಿವಾದಕ್ಕೆ ಗುರಿಯಾಗಿದೆ. ಸ್ಥಳೀಯ ನಿವಾಸಿಗಳನ್ನು ದೇಶದ್ರೋಹಿಗಳು, ದನಕಳ್ಳರು ಎಂದು ಹೇಳಿರುವುದನ್ನು ಖಂಡಿಸಿ, ಧರ್ಮದ ಆದಾರದಲ್ಲಿ ಪರಸ್ಪರ ಎತ್ತಿಕಟ್ಟಿ ಎರಡು ಗುಂಪುಗಳ ನಡುವೆ ಗಲಾಟೆ ಎಬ್ಬಿಸಲು ಪ್ರಯತ್ನ ನಡೆಸಿರುವುದಾಗಿ ಪಾಟ್ರಕೋಡಿಯ ನಾಗರಿಕರು ವಿಟ್ಲ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.