ವಿಟ್ಲ: ಬೈಕ್ ಅಪಘಾತದಿಂದಾಗಿ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾಣಿ ಬುಡೋಳಿಯಲ್ಲಿ ನಡೆದಿದೆ.
ಬುಡೋಳಿ ಪಾಟ್ರಕೋಡು ನಿವಾಸಿ ಫಾರೂಕ್(35 ವ.) ಮೃತಪಟ್ಟವರು.
ಫಾರೂಕ್‌ರವರಿಗೆ 10 ವರ್ಷಗಳ ಹಿಂದೆ ವಿವಾಹವಾಗಿದ್ದು, ಕೆಲ ದಿನಗಳ ಹಿಂದೆಯಷ್ಟೆ ಅವರ ಪತ್ನಿಗೆ ಹೆರಿಗೆಯಾಗಿತ್ತು. ಫಾರೂಕ್ ಮಗುವನ್ನು ನೋಡಲು ದೇರಳಕಟ್ಟೆಯ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ದೇರಳಕಟ್ಟೆ ಆಸ್ಪತ್ರೆಯ ಬಳಿ ಅಪಘಾತ ನಡೆದಿತ್ತು. ಅಪಘಾತದಿಂದಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಿಸದೆ ಅವರು ಮಾ.17ರಂದು ಮೃತಪಟ್ಟಿದ್ದಾರೆ.