ಕನ್ಯಾನದಲ್ಲಿ ಪ್ರಜಾಧ್ವನಿ ಯಾತ್ರೆಯ ಸಾರ್ವಜನಿಕ ಸಭೆ

0

ವಿಟ್ಲ: ಸಾಲೆತ್ತೂರು, ಕರೋಪಾಡಿ, ಕನ್ಯಾನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಾ.೧೮ರಂದು ನಡೆದ ಬಂಟ್ವಾಳ ಪ್ರಜಾಧ್ವನಿ ಯಾತ್ರೆಯ ಬಳಿಕ ಕನ್ಯಾನ ಪೇಟೆಯಲ್ಲಿ ಸಾರ್ವಜನಿಕ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ರಮಾನಾಥ ರೈ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿರವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.


ಯಾತ್ರೆಯ ಸಂಚಾಲಕ ಪಿಯೂಸ್ ಎಲ್.ರಾಡ್ರಿಗಸ್, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ. ಎಸ್. ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಂಚಾಯತ್‌ರಾಜ್ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಜಿ ಎ. ಉಸ್ಮಾನ್ ಕರೋಪಾಡಿ, ಮಾಜಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ಕನ್ಯಾನ ಗ್ರಾ.ಪಂ.ಅಧ್ಯಕ್ಷ ಕೆ.ಪಿ.ಅಬ್ದುಲ್‌ರಹಿಮಾನ್, ಕರೋಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಅನ್ವರ್ ಕರೋಪಾಡಿ, ಸಾಲೆತ್ತೂರು ಗ್ರಾ.ಪಂ.ಅಧ್ಯಕ್ಷ ಹಸೈನಾರ್, ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಮಾಣಿ ಗ್ರಾ.ಪಂ.ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ , ಕನ್ಯಾನ ವಲಯ ಅಧ್ಯಕ್ಷ ಅಬ್ದುಲ್ ಮಜಿದ್, ಯೂತ್ ಅಧ್ಯಕ್ಷ ಇಬ್ರಾಹಿಂ ನವಾಝ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ಕೆಪಿಸಿಸಿ ಮಹಿಳಾ ಕಾರ್ಯದರ್ಶಿ ಮಲ್ಲಿಕಾ ಪಕ್ಕಳ, ಕೊಳ್ನಾಡು ವಲಯಾಧ್ಯಕ್ಷ ಪವಿತ್ರ ಪೂಂಜ, ವಿಟ್ಲಪಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಸಂದೇಶ್ ಶೆಟ್ಟಿ ಬಿಕ್ನಾಜೆ, ಪ್ರಮುಖರಾದ ಐಡಾ ಸುರೇಶ್, ಲೋಲಾಕ್ಷಿ ಶೆಟ್ಟಿ, ಪದ್ಮನಾಭ ರೈ, ವಿಟ್ಠಲ ಶೆಟ್ಟಿ, ಹರ್ಷದ್ ಸರವು, ಚಿತ್ತರಂಜನ್ ಶೆಟ್ಟಿ, ಮೋಹನದಾಸ್, ಬ್ಲಾಕ್ ಕಾರ್ಯದರ್ಶಿ ಪ್ರಶಾಂತ್ ಪಕ್ಕಳ, ಸಿದ್ಧಿಕ್ ಸರವು, ಸಾಲೆತ್ತೂರು, ಕನ್ಯಾನ, ಕರೋಪಾಡಿ ಗ್ರಾ.ಪಂ.ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here