ಬಿಸಿರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ರೈತ ಮೋರ್ಚಾದ ಬೃಹತ್ ಸಮಾವೇಶ

0

ಬಂಟ್ವಾಳ: ಬಂಟ್ವಾಳ ಕ್ಷೇತ್ರದ ಮತದಾರರು ನೀಡಿದ ಪ್ರತಿಯೊಂದು ಮತಕ್ಕೂ ನ್ಯಾಯ ಸಿಗುವ ಕೆಲಸವನ್ನು ಅತ್ಯಂತ ಪ್ರಾಮಾಣಿಕ ಪ್ರಯತ್ನದ ಮೂಲಕ ಮಾಡಿದ್ದೇನೆ ಎಂಬ ಆತ್ಮ ತೃಪ್ತಿ ಇದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.

ಅವರು ಬಂಟ್ವಾಳ ಮಂಡಲದ ವತಿಯಿಂದ ಬಿಸಿರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ರೈತ ಮೋರ್ಚಾದ ಬೃಹತ್ ಸಮಾವೇಶದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋವಿಡ್ ಮಹಾಮಾರಿಯ ಸಂದರ್ಭದಲ್ಲಿ ಒಂದು ಲಕ್ಷ ಕೋಟಿ ರೂ ಅನುದಾನವನ್ನು ನರೇಗದ ಮೂಲಕ ಕೃಷಿಕರಿಗೆ ನೀಡಿದ ಪರಿಣಾಮವಾಗಿ ಕೋವಿಡ್ ಬಳಿಕ ದೇಶದ ಆರ್ಥಿಕ ಪರಿಸ್ಥಿತಿ ಸ್ಥಿರವಾಯಿತು ಎಂಬುದನ್ನು ಉಲ್ಲೇಖ ಮಾಡಿದರು.

ಬಂಟ್ವಾಳದಲ್ಲಿ 24496 ಕೃಷಿಕರಿಗೆ ರೈತ ಕಿಸಾನ್ ಸನ್ಮಾನ್ ಯೋಜನೆ, 21 ಕೋಟಿ ರೂ. ಫಸಲ್ ಬಿಮಾ ಯೋಜನೆ ಯ ಮೂಲಕ ಸಿಕ್ಕಿದೆ.
13 ಕೋಟಿ ವೆಚ್ಚದಲ್ಲಿ ಜಕ್ರಿಬೆಟ್ಟು ಎಂಬಲ್ಲಿ ಕಿಂಡಿ ಅಣೆಕಟ್ಟು ಸಹಿತ ಸೇತುವೆ ನಿರ್ಮಾಣವಾಗಲಿದ್ದು, ಇದು ಈ ಭಾಗದ ರೈತರಿಗೆ ಅತ್ಯಂತ ಹೆಚ್ಚು ಪ್ರಯೋಜನವಾಗಲಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದರೆ ಅವರು ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕೃಷಿ ಮತ್ತು ಋಷಿ ಪರಂಪರೆಯನ್ನು ಹೊಂದಿರುವ ಭಾರತ ದೇಶ ಕೃಷಿಯಲ್ಲಿ ಪರಿವರ್ತನೆಯನ್ನು ಹೊಂದಿದ್ದು, ಉನ್ನತ ಸಾಧನೆ ಮಾಡಿದ ಬಾರತದತ್ತ ಇಡೀ ಜಗತ್ತು ನೋಡುವಂತಿದೆ. ಇಸ್ರೇಲ್ ಮಾದರಿಯ ಕೃಷಿಯನ್ನು ಮಾಡುವ ದೇಶಗಳಿಗೆ ಇಸ್ರೇಲ್ ಗೆ ಕೃಷಿ ಪರಂಪರೆಯನ್ನು ನೀಡಿದ ದೇಶ ಭಾರತ ಎಂಬ ಸತ್ಯ ಗೊತ್ತಿರಬೇಕು ಎಂದರು.


ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ, ಅಭಿವೃದ್ದಿಯ ಶಕೆ ಪ್ರಾರಂಭವಾಗಿದ್ದು ಜನರು ಬಿಜೆಪಿಯತ್ತ ಆಕರ್ಷಣೆಯಾಗಿದ್ದಾರೆ. ಕಾಂಗ್ರೇಸ್ ಹತಾಶೆಯಿಂದ ಚುನಾವಣೆ ಬಂದಾಗ ಅಧಿಕಾರದ ಆಸೆಯಿಂದ ಸುಳ್ಳು ಆಶ್ವಾಸನೆಗಳು ನೀಡಲು ಪ್ರಾರಂಭಿಸಿದೆ ಎಂದರು.

ಪ್ರಸ್ತಾವಿಕವಾಗಿ ಮಾತನಾಡಿದಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ರಾಧಕೃಷ್ಣ ಬೊಳ್ಳೂರು ಅವರು ಅತಿಥಿಗಳನ್ನು ಸ್ವಾಗತಿಸಿದರು. ರೈತ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಕುಮಾರ್ ಶೆಟ್ಟಿ ಮೇನಾಲ ವಂದಿಸಿದರು. ಬಂಟ್ವಾಳ ಮಂಡಲದ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ ಕಾರ್ಯಕ್ರಮ ನಿರೂಪಿಸಿದರು.

ವೇದಿಕೆಯಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಾಜಿ ಶಾಸಕರುಗಳಾದ ಎ.ರುಕ್ಮಯ ಪೂಜಾರಿ, ಕೆ. ಪದ್ಮನಾಭ ಕೊಟ್ಟಾರಿ, ರಾಜ್ಯ ನೀರು ಸರಬರಾಜು, ಒಳಚರಂಡಿ ನಿಗಮದ ನಿರ್ದೇಶಕಿ ಸುಲೋಚನ ಜಿ.ಕೆ.ಭಟ್ ಬಂಟ್ವಾಳ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ರಾಮ್ ದಾಸ ಬಂಟ್ವಾಳ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕೊರಗಪ್ಪ ನಾಯ್ಕ್ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದೀರ್ , ರೈತ ಮೋರ್ಚಾದ ಪ್ರಭಾರಿ ಕೇಶವ ಭಟ್ ಮುಳಿಯ, ಮೋರ್ಚಾಗಳ ಜಿಲ್ಲಾ ಸಂಯೋಕ ಈಶ್ವರ ಕಟೀಲು , ಜಿಲ್ಲಾ ಮಾದ್ಯಮ ಪ್ರಮುಖ್ ಸಂದೇಶ್ ಶೆಟ್ಟಿ, ರೈತ ಮೋರ್ಚಾದ ಬಂಟ್ವಾಳ ಮಂಡಲದ ಅಧ್ಯಕ್ಷ ವಿಶ್ವನಾಥ ಪೂಜಾರಿ,ಮೂಡಬಿದರೆ ರೈತ ಮೋರ್ಚಾದ ಅಧ್ಯಕ್ಷ ಸೋಮನಾಥ, ಬೆಳ್ತಂಗಡಿ ರೈತ ಮೋರ್ಚಾದ ಅಧ್ಯಕ್ಷ ಜಯಂತ ಗೌಡ, ರೈತ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಸಂತ ಅಣ್ಣಳಿಕೆ, ರಾಘವೇಂದ್ರ ಭಟ್, ಮಂಡಲದ ಚುನಾವಣಾ ಪ್ರಭಾರಿ ರವಿ ಶಂಕರ್ ಮಿಜಾರು, ಮಂಗಳೂರು ವಿಭಾಗದ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here