ವಿಧಾನಸಭಾ ಚುನಾವಣೆ- ಬಂಟ್ವಾಳ ಚುನಾವಣಾಧಿಕಾರಿಯಿಂದ ಸುದ್ದಿಗೋಷ್ಠಿ

0

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಯನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಈಗಾಗಲೇ ಆಯೋಗ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಅಕ್ರಮ ಚಟುವಟಿಕೆ ತಡೆ, ನೀತಿ ಸಂಹಿತೆ ಉಲ್ಲಂಘನೆ ತಡೆಯುವಂತೆ ನಿಟ್ಟಿನಲ್ಲಿ ವಿವಿಧ ತಂಡಗಳನ್ನು ಸಿದ್ಧಪಡಿಸಲಾಗಿದೆ ಎಂದು ಕ್ಷೇತ್ರ ಚುನಾವಣಾಧಿಕಾರಿ ಅಬಿದ್ ಗದ್ಯಾಲ್ ತಿಳಿಸಿದರು.

ಅವರು ಬಂಟ್ವಾಳ ತಾಲೂಕು ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಕ್ರಮ ಚಟುವಟಿಕೆ, ಹಣ ಸಾಗಾಟ ತಡೆಗೆ ಕೇರಳ ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಗಳನ್ನೂ ಮಾಡಲಾಗಿದೆ. ಜತೆಗೆ 25 ಸೆಕ್ಟರ್ ಅಧಿಕಾರಿಗಳ ನಿಯೋಜನೆ, ತಲಾ 3 ಫ್ಲೈಯಿಂಗ್ ಸ್ಕಾಡ್, ವಿಡಿಯೋ ಮಾನಿಟರಿಂಗ್, ವಿಡಿಯೋ ವೀವಿಂಗ್ ತಂಡಗಳು ನಿಗಾ ಇರಿಸಲಿವೆ ಎಂದರು.

ಈಗಾಗಲೇ ರಾಜಕೀಯ ಪಕ್ಷಗಳ ಪ್ರಮುಖರ ಸಭೆಯನ್ನೂ ನಡೆಸಿ ಮಾದರಿ ನೀತಿ ಸಂಹಿತೆ ಪಾಲನೆಯ ಮಾಹಿತಿ ನೀಡಲಾಗಿದೆ. ಒಟ್ಟು 249ಬೂತ್‌ಗಳಲ್ಲಿ ಅದರಲ್ಲಿ 213 ಸಾಮಾನ್ಯ ಹಾಗೂ 36 ಸೂಕ್ಷ್ಮ ಮತಗಟ್ಟೆಗಳಾಗಿವೆ. ಯಾವುದೇ ರಾಜಕೀಯ, ಧಾರ್ಮಿಕ, ಮದುವೆ ಸೇರಿದಂತೆ ಇನ್ನಿತರ ಸಮಾರಂಭಗಳನ್ನು ನಡೆಸುದಾದರೆ ಚುನಾವಣಾಧಿಕಾರಿಗಳ ಕಚೇರಿಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು ಸುವಿಧಾ ಸಿಂಗಲ್ ವಿಂಡೋ ವ್ಯವಸ್ಥೆ ಮೂಲಕ ಅನುಮತಿ ಕೊಡಲಾಗುತ್ತದೆ. 80 ವರ್ಷಕ್ಕಿಂತ ಮೇಲ್ಪಟ್ಟವರು, 40 ಶೇ.ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿದವರಿಗೆ ಅಂಚೆ ಮತದಾನಕ್ಕೆ ಅವಕಾಶವಿದ್ದು, ಈಗಾಗಲೇ ಬಿಎಲ್‌ಒಗಳು ಅವರನ್ನು ಗುರುತಿಸಿ 12ಡಿ ಮೂಲಕ ಒಪ್ಪಿಗೆ ಪಡೆಯುವ ಕಾರ್ಯ ಆರಂಭಿಸಿದ್ದಾರೆ ಎಂದರು. ಬಂಟ್ವಾಳ ತಹಶೀಲ್ದಾರ್ ಎಸ್.ಬಿ.ಕೂಡಲಗಿ, ಉಪತಹಸೀಲ್ದಾರ್ ನವೀನ್ ಬೆಂಜನಪದವು ಸುದ್ದಿಗೋಷ್ಠಿಯಲ್ಲಿದ್ದರು.

LEAVE A REPLY

Please enter your comment!
Please enter your name here