ಎಸ್ಸೆಸ್ಸೆಲ್ಸಿ ಮೊದಲ ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿನ 41 ವಿದ್ಯಾರ್ಥಿಗಳು ಗೈರು

0

ರಾಜ್ಯಾದ್ಯಾಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭಗೊಂಡಿದ್ದು ಮಾ.31ರಂದು ನಡೆದ ಮೊದಲ ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿನ ಮಕ್ಕಳ ಪರೀಕ್ಷಾ ಹಾಜರಾತಿಯ ಅಂಕಿ ಅಂಶಗಳು ದೊರೆತಿದೆ. ತಾಲೂಕಿನ ಒಟ್ಟು 17 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದು, ಪ್ರಥಮ ಭಾಷೆಯ ಪರೀಕ್ಷೆಗೆ ಒಟ್ಟು 128 ಪುನರಾವರ್ತಿತ ವಿದ್ಯಾರ್ಥಿಗಳೂ ಸೇರಿದಂತೆ 5494 ವಿದ್ಯಾರ್ಥಿಗಳು ಹಾಜರಾಗಬೇಕಿತ್ತು. ಶುಕ್ರವಾರ 5453 ಮಂದಿ ಪರೀಕ್ಷೆಗೆ ಹಾಜರಾಗಿದ್ದು, 41 ಮಂದಿ ಗೈರುಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here