ಬಂಟ್ವಾಳ: ಪೈಂಟಿಂಗ್ ಕೆಲಸದ ವೇಳೆ ಕಟ್ಟಡದಿಂದ ಆಯ ತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಜಕ್ರಿಬೆಟ್ಟು ಪಲ್ಲಿಕಂಡ ನಿವಾಸಿ ರಾಬರ್ಟ್ ವೇಗಸ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸೋರ್ನಾಡು ಎಂಬಲ್ಲಿ ಪೈಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಶುಕ್ರವಾರ ಮಧ್ಯಾಹ್ನ 1 ಗಂಟೆ ವೇಳೆಗೆ ಆಕಸ್ಮಿಕವಾಗಿ ಮೇಲಿನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತಾದರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.