ದಾಖಲೆಗಳಿಲ್ಲದೆ ಅಕ್ಕಿ ಸಾಗಾಟ- ಬಂಟ್ವಾಳ ಪೊಲೀಸರ ಕಾರ್ಯಾಚರಣೆ

0

ಬಂಟ್ವಾಳ: ದಾಖಲೆಗಳಿಲ್ಲದೆ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಫರಂಗಿಪೇಟೆಯಲ್ಲಿ ವಶಕ್ಕೆ ಪಡೆದುಕೊಂಡ ಪ್ರಕರಣ ಬೆಳಕಿಗೆ ಬಂದಿದೆ.50 ಕೆ.ಜಿ.ತೂಕದ 300 ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ ಒಟ್ಟು ಆರು ಲಕ್ಷ ಮೌಲ್ಯದ 15000 ಕೆ.ಜಿ.ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ಮಾ.31 ರಾತ್ರಿ  ವೇಳೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ವಾಹನಗಳ ತಪಾಸಣೆ ಮಾಡಲಾಗಿತ್ತು ಈ ಸಂದರ್ಭದಲ್ಲಿ ಫರಂಗಿಪೇಟೆಯಲ್ಲಿ ಲಾರಿಯನ್ನು ತಡೆದು ತಪಾಸಣೆ ನಡೆಸುತ್ತಿದ್ದಾಗ ಲಾರಿಯೊಳಗಿದ್ದ ಅಕ್ಕಿ ಲೋಡ್ ಗೆ ಯಾವುದೇ ದಾಖಲೆಗಳಿಲ್ಲದ ಹಿನ್ನೆಲೆಯಲ್ಲಿ ಲಾರಿ ಚಾಲಕ ಬೆಂಗಳೂರು ನೆಲಮಂಗಲ ನಿವಾಸಿ ಸುನಿಲ್ ಎಂಬಾತನ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಕಲಂ.98 ಕೆ.ಪಿ.ಆಕ್ಟ್ ನಂತೆ ಎನ್.ಸಿ.ನಂ.20/2023  ರಂತೆ ದೂರು ದಾಖಲಿಸಿ ಪ್ರಕರಣ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here