ಪುತ್ತೂರು: ಜು.26ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಆ.2 ರಂದು ಬಂಧಿಸಿದ್ದಾರೆ. ಬೆಳ್ಳಾರೆ ಪಲ್ಲಿಮಜಲು ನಿವಾಸಿಗಳಾದ ಸದ್ದಾಂ(32ವ) ಮತ್ತು ಹಾರಿಸ್(42ವ) ಬಂಧಿತ ಆರೋಪಿಗಳು.
ಈ ಪ್ರಕರಣದಲ್ಲಿ ಈಗಾಗಲೇ ಆರೋಪಿಗಳಾದ ಶಫೀಕ್ ಮತ್ತು ಜಾಕೀರ್ ಅವರನ್ನು ಜು.28 ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ ಬಳಿಕ ಪೊಲೀಸರು ಆರೋಪಿಗಳ ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ಕೇಳಿಕೊಂಡಂತೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನ್ಯಾಯಾಲಯ ನೀಡಿತ್ತು. ಬಳಿಕ ತನಿಖೆಯನ್ನು ಮುಂದುವರಿಸಿದ ಪೊಲೀಸರು ಹೆಚ್ಚಿನ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಸದ್ದಾಂ ಮತ್ತು ಹಾರಿಸ್ ಅನ್ನು ಬಂಧಿಸಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ನಡೆಯುತ್ತಿದೆ ಎಂದು ದ.ಕ.ಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.