ವಿಟ್ಲ : ಐಜಿ ಚಂದ್ರ ಗುಪ್ತರಿಂದ ಚುನಾವಣೆ ಹಿನ್ನೆಲೆ ಭದ್ರತೆಗಳ ಪರಿಶೀಲನೆ

0

ಚುನಾವಣಾ ಹಿನ್ನಲೆಯಲ್ಲಿ ವಿಟ್ಲ ಠಾಣೆಗೆ ಭೇಟಿ ನೀಡಿದ ಪಶ್ಚಿಮ ವಲಯ ಐ.ಜಿ. ಡಾ. ಚಂದ್ರಗುಪ್ತ ಅವರು ಸಾರ್ವಜನಿಕರ ಸಭೆಯನ್ನು ನಡೆಸಿ, ವಿವಿಧ ಗಡಿ ಭಾಗದ ತಪಾಸಣಾ ಕೇಂದ್ರಗಳನ್ನು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಠಾಣೆ ಅಥವಾ ಹೊರ ಠಾಣೆಯನ್ನು ಸ್ಥಾಪನೆ ಮಾಡಿದ ಮೇಲೆ ಸಾರ್ವಜನಿಕರ ಅನುಕೂಲಕ್ಕೆ ನಿತ್ಯ ತೆರೆಯಲಾಗುತ್ತದೆ. ನೆಲ್ಲಿಕಟ್ಟೆ ಹಾಗೂ ಆನೆಕಲ್ಲು ಭಾಗದಲ್ಲಿ ಚೆಕ್ ಪೋಸ್ಟ್ ಇದ್ದು, ಸಿಬ್ಬಂದಿಗಳು ಮಾತ್ರ ಕನ್ಯಾನದಲ್ಲಿ ತಪಾಸಣೆ ಮಾಡುವ ಕಾರ್ಯ ಮಾಡಬಾರದು. ಕನ್ಯಾನ ಹೊರ ಠಾಣೆಯ ಸ್ಥಾಪನೆಯ ಉದ್ದೇಶ ಹಾಗೂ ತಪಸಣಾ ಕೇಂದ್ರದ ಪ್ರತ್ಯೇಕ ಸ್ಥಳದಲ್ಲಿ ಸ್ಥಾಪನೆಯಾಗಿರುವ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಚುನಾವಣಾ ನೀತಿ ಜಾರಿಯಾಗುತ್ತಿದ್ದಂತೆ ತಪಾಸಣಾ ಕೇಂದ್ರಗಳನ್ನು ಅಳವಡಿಸಲಾಗಿದೆ. ಶಾಶ್ವತವಾದ ಚೆಕ್ ಪೋಸ್ಟ್ ಹೊರತಾಗಿ ಬಿಟ್ಟಿರುವ ರಸ್ತೆಗಳನ್ನು ಸೇರಿಸಿ ಒಳ ಮಾರ್ಗಗಳಿಗೆ ಹೆಚ್ಚುವರಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಪ್ಯಾರಾ ಮಿಲಿಟರಿಯನ್ನು ಕರೆಸಿಕೊಳ್ಳಲಾಗುತ್ತಿದ್ದು, ಅವರಿಂದಲೂ ತಪಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ ಎಂದು ಹೇಳಿದರು.

ಠಾಣೆಯ ಸಿಬ್ಬಂದಿಗಳು ಠಾಣೆಯಲ್ಲಿ ಇರುವುದಕ್ಕಿಂತ ಹೆಚ್ಚಾಗಿ ಒಳ ರಸ್ತೆಗಳ ಮೂಲಕ ಸಂಚರಿಸುವ ವ್ಯವಸ್ಥೆಯ ಬಗ್ಗೆ ನಿಘಾ ಇಡಲು ಸೂಚನೆಗಳನ್ನು ನೀಡಲಾಗಿದೆ. ಈ ತಪಾಸಣಾ ಕಾರ್ಯ ಆರಂಭವಾಗಿದ್ದು, ಮುಂದಿನ ದಿನದಲ್ಲಿ ಇನ್ನಷ್ಟು ಬಿಗಿಯಾಲಿದೆ. ಠಾಣೆಯನ್ನು ಮೇಲ್ದರ್ಜೆಗೇರಿಸುವುದರಿಂದ ಜನರಿಗೆ ಸೇವೆಗಳು ತಕ್ಷಣಕ್ಕೆ ಸಿಗಲಿ ಎಂಬ ಕಾರಣಕ್ಕಾಗಿದೆ. ಸಿಬ್ಬಂದಿ ಹೆಚ್ಚಳವಾಗಿ, ಸಿಬ್ಬಂದಿಗಳ ಕಾರ್ಯವ್ಯಾಪ್ತಿ ಸುಧಾರಿಸಿ ಎರಡು ಮೂರು ವರ್ಷದಲ್ಲಿ ಸುದಾರಿಸುತ್ತದೆ ಎಂದು ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಆಮ್ಟೆ, ಇನ್ಸ್ ಪೆಕ್ಟರ್ ನಾಗರಾಜ್ ಎಚ್.ಇ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here