ಬಂಟ್ವಾಳ: ರೈಲ್ವೆ ಹಳಿಯ ಸಮೀಪ ಅಗ್ನಿ ಅವಘಡ

0

ಬಂಟ್ವಾಳ : ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿ ರೈಲ್ವೆ ಹಳಿಯ ಸಮೀಪ ಹಾಗೂ ಅದರ ಎದುರು ಬದಿಯ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಕೆಲ ಹೊತ್ತು ಬಿಸಿರೋಡಿನಿಂದ ನಂದಾವರಕ್ಕೆ ತೆರಳುವ ರಸ್ತೆ ಬಂದ್ ಆಗಿರುವ ಘಟನೆ ವರದಿಯಾಗಿದೆ.

  • ರಸ್ತೆ ತುಂಬಾ ಹೊಗೆ ತುಂಬಿದ್ದು, ಬೆಂಕಿಯ ಜ್ವಾಲೆ ವಿಪರೀತವಾಗಿ ಹರಡಿತ್ತು.ಬಂಟ್ವಾಳ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ನೀರು ಹಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಹೇಗೆ ಬೆಂಕಿ ಹತ್ತಿಕೊಂಡಿದೆ ಎಂಬ ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ.ರಸ್ತೆಯ ಎರಡೂ ಬಾಗದಲ್ಲಿ ಕಸದ ರಾಶಿ ಬಿದ್ದಿದ್ದು ಕಸದ ರಾಶಿಗೆ ಯಾರೋ ಬೆಂಕಿ ಹಾಕಿರ ಬೇಕು ಎಂದು ಹೇಳಲಾಗುತ್ತಿದೆ. ಸ್ಥಳದಲ್ಲಿ ಬಂಟ್ವಾಳ ನಗರ ಠಾಣಾ ಎಸ್ ಐ ರಾಮಕೃಷ್ಣ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here