ಎ.20: ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿಯಾಗಿ ರಮಾನಾಥ ರೈ ನಾಮಪತ್ರ ಸಲ್ಲಿಕೆ

0

ಬಂಟ್ವಾಳ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರು 20, ಏಪ್ರಿಲ್, 2023ರ ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ. ಬಿ.ಸಿ.ರೋಡ್ ನಲ್ಲಿರುವ ರಮಾನಾಥ ರೈ ಅವರ ಚುನಾವಣಾ ಪ್ರಚಾರ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ.


ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಿಂದ ಪಾದಯಾತ್ರೆಯ ಮೂಲಕ ಬಿ.ಸಿ.ರೋಡ್ ಮಿನಿವಿಧಾನಸೌಧದಲ್ಲಿರುವ ಚುನಾವಣಾ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.


ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪಕ್ಷದ ಪ್ರಮುಖರುಗಳಾದ ಪಿಯೂಸ್ ರಾಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಪದ್ಮನಾಭ ರೈ, ಅಬ್ಬಾಸ್ ಆಲಿ, ಲುಕ್ಮಾನ್ ಬಂಟ್ವಾಳ, ಜನಾರ್ಧನ ಚೆಂಡ್ತಿಮಾರ್, ಸುರೇಶ್ ಕುಮಾರ್ ನಾವೂರ ಮುಂತಾದವರು ವೇದಿಕೆಯಲ್ಲಿದ್ದರು.


ಇದೇ ವೇಳೆ ಬಿ.ಜೆ.ಪಿ. ಕಾರ್ಯಕರ್ತರುಗಳಾದ ಮುರಳೀಧರ ಬಾಂಬಿಲ, ಜನಾರ್ಧನ ಪಚ್ಚಿನಡ್ಕ ಕಳ್ಳಿಗೆ,ಎಸ್ ಡಿಪಿಐಯ ಸಜೀಪಮೂಡ ಗ್ರಾಮ ಸಮಿತಿ ಅಧ್ಯಕ್ಷ ಮಾಲಿಕ್ ಕೊಳಕೆ, ಮೊಹಮ್ಮದ್ ಶಾಖೀರ್, ಸವಾನ್ ಬೋಗೋಡಿ, ಸಫ್ವಾನ್ ಬೋಗೋಡಿ, ಮೊಹಮ್ಮದ್ ಇರ್ಷಾದ್ ಬೋಗೋಡಿ, ತಮೀಜ್ ಬೋಗೋಡಿ, ಮೊಹಮ್ಮದ್ ರಿಝ್ವಾನ್ ಗುಡ್ಡೆಯಂಗಡಿ, ಮೊಹಮ್ಮದ್ ಪಾರೀಸ್ ಮುಂತಾದವರು ತಮ್ಮ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಪಕ್ಷದ ಎಲ್ಲಾ ಮುಂಚೂಣಿ ಘಟಕಗಳ ಮುಖಂಡರು, ಬ್ಲಾಕ್ ಹಾಗೂ ವಲಯ ಮುಖಂಡರುಗಳು ಉಪಸ್ಥಿತರಿದ್ದರು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here