ಪುತ್ತೂರು: ಮಾಣಿಯಲ್ಲಿ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆ ನಡೆದ ಘಟನೆಗೆ ಸಂಬಂಧಿಸಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಸಂಸದ ನಳೀನ್ ಕುಮಾರ್ ಕಟೀಲ್ ಮತ್ತು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್, ಬೃಜೇಶ್ ಚೌಟ, ಸುದರ್ಶನ ಬಜ, ಗಣೇಶ್ ರೈ ಮಾಣಿ, ಹರೀಶ್ ಶೆಟ್ಟಿ ಪೆರಾಜೆ, ವಿನೀತ್ ಪೆರಾಜೆ, ಸಂಪತ್ ಸುವರ್ಣ ಕಡೇಶಿವಾಲಯ,ವಿಜಯ ಮಾಣಿ ಮತ್ತಿತರರು ಉಪಸ್ಥಿತರಿದ್ದರು.