ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಲಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ ಮಿಷನ್ ಯೋಜನೆಯ ಅಡಿಯಲ್ಲಿ ಮಾಹಿತಿ ಶಿಕ್ಷಣ ಮತ್ತು ಸಂವಹನ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಕಾರ್ಯಕ್ರಮಗಳ ಅಂಗವಾಗಿ ಬೀದಿ ನಾಟಕಕ್ಕೆ ಚಾಲನೆಯನ್ನ ನೀಡಲಾಯಿತು.
ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಮೋಗರ್ನಾಡು ಎಂಬಲ್ಲಿ ಜರ್ನಿ ಥಿಯೇಟರ್ ಕುಡ್ಲ ಚಾಲನೆ ನೀಡಿದರು.
ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿನುತಾ ಪುರುಷೋತ್ತಮ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷ ಪ್ರಕಾಶ್ ಮಡಿಮಗೆರು, ಸದಸ್ಯರಾದ ಕಿಶೋರ್ ಶೆಟ್ಟಿ ಅಂತರ, ರಂಜಿತ್ ಕೆದ್ಧೇಲ್ , ಉಷಾಲಾಕ್ಷಿರಮಾನಂದ,ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವ ಬಿರಾದಾರ್, ಗ್ರಾಮ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು, ಎನ್ ಎಂ ಆರ್ ಸದಸ್ಯರುಗಳು ಉಪಸ್ಥಿತರಿದ್ದರು.