ಸರಕಾರಿ ಪ್ರಥಮ ದರ್ಜೆ ವಾಮದಪದವು ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

0

ವಾಮದಪದವು: ಸರಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವು ಇಲ್ಲಿನ ವಿಜ್ಞಾನ ಸಂಘ ಮತ್ತು ಪರಿಸರ ಸಂಘದ ಜಂಟಿ ಆಶ್ರಯದಲ್ಲಿ ವಿಶ್ವ ಪರಿಸರ ದಿನ ಜೂನ್.5 ರಂದು ಆಚರಿಸಲಾಯಿತು.

ಪರಿಸರ ಮಾಲಿನ್ಯ ಮತ್ತು ಸಂರಕ್ಷಣೆಗೆ ಸಂಬಂಧಿಸಿದ ವಿಜ್ಞಾನ ಮಾದರಿಗಳು ಹಾಗೂ ಔಷಧೀಯ ಗುಣವುಳ್ಳ ಸಸ್ಯಗಳ ಪ್ರದರ್ಶನವನ್ನು ಕಾಲೇಜಿನ ಆವರಣದಲ್ಲಿ ಏರ್ಪಡಿಸಲಾಗಿತ್ತು.

ಪ್ರಾಂಶುಪಾಲ ಡಾ. ರಾಧಾಕೃಷ್ಣ ಹೆಚ್ ಬಿ ಔಷಧೀಯ ಗಿಡ ನೆಟ್ಟು ಅದಕ್ಕೆ ನೀರುಣಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಬೀಟ್ ಪ್ಲಾಸ್ಟಿಕ್ ಪೊಲ್ಯುಷನ್’ ಎಂಬ ವಿಷಯದ ಮೇಲೆ ರಸಪ್ರಶ್ನೆ, ರಂಗೋಲಿ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿಜ್ಞಾನ ಸಂಘದ ಸಂಯೋಜಕಿ ಉಷಾ ಬಿ, ಪರಿಸರ ಸಂಘದ ಸಂಯೋಜಕರಾದ ಅನಿಲ್ ಕುಮಾರ್ ಎ, ಐಕ್ಯೂಎಸಿ ಸಂಚಾಲಕ ಡಾ. ಮೋಹನ್‌ದಾಸ್ ಹಾಗೂ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಲಕ್ಷ್ಮೀನಾರಾಯಣ ಕೆ, ಶುಭಾ ಕೆ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ರ ಸ್ವಯಂಸೇವಕರಿಂದ ಸಂಯೋಜಕರುಗಳಾದ ಡಾ. ಮೇರಿ ಎಮ್.ಜೆ ಮತ್ತು ಉದಯ್‌ಕುಮಾರ್ ಸಿ ಆರ್ ಇವರ ನೇತೃತ್ವದಲ್ಲಿ ಸ್ವಚ್ಛತಾ ಶ್ರಮದಾನ ಜರುಗಿತು.

LEAVE A REPLY

Please enter your comment!
Please enter your name here