ಬಂಟ್ವಾಳ ವಕೀಲರ ಸಂಘದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

0

ಬಂಟ್ವಾಳ : ಬಂಟ್ವಾಳ ವಕೀಲರ ಸಂಘ ಇದರ 2023-25 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸ್ಪರ್ಶ ಕಲಾ ಮಂದಿರ ಬಿ.ಸಿ. ರೋಡ್ ನಲ್ಲಿ ನಡೆಯಿತು. 2023-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ರಿಚರ್ಡ್ ಕೊಸ್ತಾ ಎಂ, ಉಪಾಧ್ಯಕ್ಷರಾಗಿ ರಾಜೇಶ್ ಬೊಳ್ಳುಕಲ್ಲು, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಡಿ ಬೈರಿಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಸುನಿತಾ ಕೆ ಕೆ, ಕೋಶಾಧಿಕಾರಿಯಾಗಿ ನಿರ್ಮಲ ಶೆಟ್ಟಿ ಪ್ರಮಾಣವಚನ ಸ್ವೀಕರಿಸಿದರು.

ಪದಗ್ರಹಣ ಕಾರ್ಯಕ್ರಮವನ್ನು ದೀಪಬೆಳಗಿಸುವುದರ ಮುಖಾoತರ ಅಂಕೋಲದ ಹಿರಿಯ ಸಿವಿಲ್ ನ್ಯಾಯಾಧಿಶ ಮನೋಹರ ಎಂ ಚಾಲನೆ ನೀಡಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ನೀಡಿ ಶುಭಹಾರೈಸಿದರು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಂಟ್ವಾಳದ ಹಿರಿಯ ಸಿವಿಲ್ ನ್ಯಾಯಾಧಿಶೆ ಭಾಗ್ಯಮ್ಮ, ಪ್ರಧಾನ ಸಿವಿಲ್ ನ್ಯಾಯಾಧಿಶ ಚಂದ್ರಶೇಖರ ಎಲ್ಲಪ್ಪ ತಳವಾರ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಧಿಶರಾದ ಕೃಷ್ಣಮೂರ್ತಿ ಯನ್ ಭಾಗವಹಿಸಿದ್ದರು.
ಬಂಟ್ವಾಳ ವಕೀಲರ ಸಂಘ ನಿರ್ಗಮಿತ ಅಧ್ಯಕ್ಷ ಗಣೇಶಾನಂದ ಸೋಮಯಾಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಂಟ್ವಾಳ ವಕೀಲರ ಸಂಘ ಮಾಜಿ ಅಧ್ಯಕ್ಷರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಪ್ರಸಾದ್ ಕುಮಾರ್ ರೈ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಡಿ ಬೈರಿಕಟ್ಟೆ ಧನ್ಯವಾದ ಸಲ್ಲಿಸಿ,ನರೇಂದ್ರನಾಥ ಭಂಡಾರಿಯವರು ಕಾರ್ಯಕ್ರಮ ನಿರ್ವಹಿಸಿದರು.
ಪದಗ್ರಹಣ ಕಾರ್ಯಕ್ರಮದ ನಂತರ ವಿಠ್ಠಲ ನಾಯಕ್ ಕಲ್ಲಡ್ಕ ಅವರ ತಂಡದಿಂದ ವಿನೂತನ ಶೈಲಿಯ ಗೀತಾ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here