ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆಯಾಗಿ ಶೈಲಜಾ ರಾಜೇಶ್ ಆಯ್ಕೆ

0

ಪುತ್ತೂರು:ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆಯಾಗಿ ಕರ್ನಾಟಕ ಸರಕಾರದ ಪ್ರತಿಷ್ಠಿತ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತ ,ನ್ಯಾಯವಾದಿ ಶೈಲಜಾ ರಾಜೇಶ್ ಅವಿರೋಧ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ರಾಗಿಣಿ ,ಕಾರ್ಯದರ್ಶಿಯಾಗಿ ರಶ್ಮಿ ಸತೀಶ್, ಜತೆ ಕಾರ್ಯದರ್ಶಿಯಾಗಿ ಸರೋಜಿನಿ, ಖಜಾಂಚಿಯಾಗಿ ಸುಜಾತಾ ದಿನೇಶ್ ಇವರನ್ನು ಆಯ್ಕೆ ಮಾಡಲಾಯಿತು.


ಬಿಸಿರೋಡಿನ ಗಾಣದ ಪಡ್ಪು ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ ರೇವತಿ ಬಡಗಬೆಲ್ಲೂರು ಇವರ ಅಧ್ಯಕ್ಷತೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.ಮಾಜಿ ಅಧ್ಯಕ್ಷರು ನಯನ,ಮಾಲತಿ,ಭಾರತಿ ಕುಂದರ್,ಜಯಲಕ್ಷ್ಮಿ, ಬಿಲ್ಲವ ಸಂಘದ ಕಾರ್ಯದರ್ಶಿ,ಪದಾಧಿಕಾರಿಗಳು ಉಪಸ್ಥಿತರಿದ್ದರು.ಕಾರ್ಯದರ್ಶಿ ಲಲಿತಾ ವಂದಿಸಿದರು.ಭವಾನಿ ಸ್ವಾಗತಿಸಿದರು.

LEAVE A REPLY

Please enter your comment!
Please enter your name here