ಪೂಂಜಾಲಕಟ್ಟೆ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವನ ಮಹೋತ್ಸವ ಕಾರ್ಯಕ್ರಮ

0

ಪೂಂಜಾಲಕಟ್ಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಪೂಂಜಾಲಕಟ್ಟೆ ವಲಯದ ವತಿಯಿಂದ ಉಳಿ ಕಾರ್ಯಕ್ಷೇತ್ರದ ಶ್ರೀ ಪಂಚದುರ್ಗ ದೇವಿ ದೇವಸ್ಥಾನದ ಪರಿಸದಲ್ಲಿ ವನ ಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು.


ಬಂಟ್ವಾಳ ಜನಜಾಗೃತಿ ವೇದಿಕೆಯ ಅಧ್ಯಕ್ಷ ರೊನಾಲ್ಡ್ ಡಿ ಸೋಜ ಗಿಡ ನೆಟ್ಟು ಪೋಷಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ವನ ಮಹೋತ್ಸವದ ಬಗ್ಗೆ ಮಾಹಿತಿ ನೀಡಿದರು. ಪಂಚದುರ್ಗ ದೇವಿದೇವಸ್ಥಾನದ ಉಪಾಧ್ಯಕ್ಷ ಮುತ್ತಪ್ಪ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾವು ಗಿಡ ಮತ್ತು ಹಣ್ಣಿನ ಗಿಡಗಳನ್ನು ನೆಟ್ಟಲ್ಲಿ ಪ್ರಾಣಿಗಳಿಗೆ ಆಹಾರವಾಗುತ್ತದೆ, ಇದರಿಂದ ನಮ್ಮ ಕೃಷಿಗೆ ಯಾವುದೇ ಸಮಸ್ಯೆ ಬರುವುದಿಲ್ಲ, ಬದಲಾದ ಜೀವನ ಕ್ರಮ ಮತ್ತು ಸಂಸ್ಕಾರದ ಬಗ್ಗೆ ಮಾಹಿತಿ ನೀಡಿದರು. ಟ್ರಸ್ಟ್‌ ನ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಮಾಧವ ಗೌಡ , ಯೋಜನೆ, ಸೌಲಭ್ಯ ಹಾಗೂ ಪರಿಸರದ ಬಗ್ಗೆ ಮಾಹಿತಿ ನೀಡಿದರು. ದೇವಸ್ಥಾನ ಸಮಿತಿಯ ಕೋಶಾಧಿಕಾರಿ ಸಂಜೀವ ಗೌಡ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಕೇಂದ್ರ ಒಕ್ಕೂಟ ಅಧ್ಯಕ್ಷ ಚಿದಾನಂದ ರೈ ಕಕ್ಯ, ದೇವಸ್ಥಾನದ ಕಾರ್ಯದರ್ಶಿ ರಾಮಕೃಷ್ಣ ರೈ ಹಾಗೂ ಉತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ್ ಬಿತ್ತ ಉಪಸ್ಥಿತರಿದ್ದರು. ಉಳಿ ಎ ಮತ್ತು ಬಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಶಾರದ ಅವರ ಪ್ರಾಥನೆಯೊಂದಿಗೆ ಪಾರಂಭವಾದ ಕಾರ್ಯಕ್ರಮದ ನಿರೂಪಣೆಯನ್ನು ವಲಯದ ಮೇಲ್ವಿಚಾರಕಿ ಅಶ್ವಿನಿ ಜಿ ಮಾಡಿದರು. ಜ್ಞಾನವಿಕಾಸ ಸಮನ್ವಯಧಿಕಾರಿ ಚಂದ್ರಮೋಹಿನಿ ಸ್ವಾಗತಿಸಿದರು. ಉಳಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶೇಖರ್ ವಂದಿಸಿದರು.

LEAVE A REPLY

Please enter your comment!
Please enter your name here