ಬಂಟ್ವಾಳ: ಕಲ್ಲಡ್ಕ ವಲಯ ಬಂಟರ ಸಂಘದ ಆಶ್ರಯದಲ್ಲಿ ಮರಾಠಿ ಸಮಾಜ ಭವನ ಪೂರ್ಲಿಪಾಡಿ ಕಲ್ಲಡ್ಕದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಆ.6ರಂದು ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಲ್ಲಡ್ಕ ವಲಯ ಬಂಟರ ಸಂಘದ ಅಧ್ಯಕ್ಷ ಪದ್ಮನಾಭ ರೈ ದೀಪ ಬೆಳಗಿಸುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತುಂಬೆ ಬಿಎ ಕಾಲೇಜಿನ ರಾಜ್ಯಶಾಸ್ತ್ರದ ಉಪನ್ಯಾಸಕ ದಿನೇಶ್ ಶೆಟ್ಟಿ ಅಳಿಕೆ ಆಟಿ ತಿಂಗಳ ವಿಶೇಷತೆ ಬಂಟ ಸಂಸ್ಕೃತಿಯ ಬಗ್ಗೆ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹೇಮ ಜಯರಾಮ ರೈ ತಿಂಗಳ ವಿಶೇಷತೆ ಬಗ್ಗೆ ಮತ್ತು ಮಹಿಳಾ ಪ್ರಧಾನ ಬಂಟ ಸಮಾಜದ ಬಗ್ಗೆ ಮಾತನಾಡಿದರು. ವೇದಿಕೆಯಲ್ಲಿ ಕರ್ನಾಟಕ ಸರಕಾರದ ಮಾಜಿ ಸಚಿವ ಬಿ ರಮಾನಾಥ ರೈ ,ತಾಲೂಕು ಪಂಚಾಯತ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ದುರ್ಗಾ ಫೆಸಿಲಿಟಿಸ್ ಮ್ಯಾನೇಜ್ಮೆಂಟ್ ಸರ್ವಿಸ್ ಮಾಲಕ ಸಚ್ಚಿದಾನಂದ ಶೆಟ್ಟಿ, ತಾಲ್ಲೂಕು ಬಂಟರ ಸಂಘದ ಖಜಾಂಚಿ ಪ್ರತಿಭಾ ಏ ರೈ, ಬಂಟ್ವಾಳ ತಾಲೂಕು ಮಹಿಳಾ ವಿಭಾಗದ ಅಧ್ಯಕ್ಷೆ ರಮಾ ಎಸ್ ಭಂಡಾರಿ ಯುವ ಬಂಟರ ಸಂಘದ ಅಧ್ಯಕ್ಷ ನಿಶಾನ್ ಆಳ್ವ ಬಿಸಿ ರೋಡ್, ಮಹಿಳಾ ವಿಭಾಗದ ಕೋಶಾಧಿಕಾರಿ ಸುಜಾತ ಪಿ ರೈ ವಲಯ ಬಂಟರ ಸಂಘದ ಗೌರವಾಧ್ಯಕ್ಷ ದಿವಾಕರ್ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯ ಬಾಲಕೃಷ್ಣ ಆಳ್ವ, ವಲಯ ಬಂಟರ ಸಂಘದ ಮಹಿಳಾ ಸಂಘದ ಅಧ್ಯಕ್ಷೆ ನೀನಾ ರೈ, ಯುವ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಸಿನಾಜೆ ಮತ್ತು ವೇದಿಕೆಯಲ್ಲಿ ಗ್ರಾಮ ಸಮಿತಿಗಳ ಎಲ್ಲಾ ಅಧ್ಯಕ್ಷರುಗಳು ಹಾಜರಿದ್ದರು .
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಾಗೂ 2022 23ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆಯನ್ನು ಮಾಡಲಾಯಿತು .ವಲಯ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಶೆಟ್ಟಿ ಗೋಳ್ತ ಮಜಲು ವರದಿಯನ್ನು ವಾಚಿಸಿದರು .ನಾಗೇಶ್ ಶೆಟ್ಟಿ ಬೊಂಡಾಲ ಅಂತರ ಗುತ್ತು ಮತ್ತು ಸುನಾದ್ ರಾಜ್ ಶೆಟ್ಟಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ಸುರೇಶ್ ಶೆಟ್ಟಿ ಕಾಂದಿಲ ಸಹಕರಿಸಿದರು. ಸಭಾ ಕಾರ್ಯಕ್ರಮದ ನಂತರ ಆಟಿ ತಿಂಗಳ ವಿಶೇಷ ಖಾದ್ಯಗಳ ಜೊತೆಗೆ ಸಹಭೋಜನ ನಡೆಯಿತು. ನಂತರ ಪ್ರಖ್ಯಾತ ಹಾಸ್ಯ ಕಲಾವಿದರಾದ ದೀಪಕ್ ರೈ ಪಾನಜೆ ಮತ್ತು ತಂಡದವರಿಂದ ಹಾಸ್ಯ ಕಾರ್ಯಕ್ರಮ ಜರುಗಿತು.