ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ನೂತನ ಅದ್ಯಕ್ಷರಾಗಿ ಪಿ.ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು ಆಯ್ಕೆ

0

ವಿಟ್ಲ: ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ನೂತನ ಅದ್ಯಕ್ಷರಾಗಿ ಪಿ.ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು ರವರು ಆಯ್ಕೆಯಾಗಿದ್ದಾರೆ.


ಅವರು ಈ ಹಿಂದೆ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಮಾಣಿ ವಲಯಾಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. ಪಿ. ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು ರವರು ಪ್ರಸ್ತುತ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸದಸ್ಯರಾಗಿ, ದ.ಕ.ಜೇನು ವ್ಯವಸಾಯಗಾರರ ಸಹಕಾರ ಸಂಘದ ಉಪಾಧ್ಯಕ್ಷರಾಗಿ, ಮಂಗಳೂರು ಅಡಿಕೆ ಬೆಳೆಗಾರರ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾಗಿರುವ ಅವರು‌ ವಿವಿಧ ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here