ನದಿಯಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ : ವಿಚಾರಣೆ ಆರಂಭಿಸಿದ ಅಂಚೆ ಇಲಾಖೆ ಅಧಿಕಾರಿಗಳು

0

ಬಂಟ್ವಾಳ: ಪುದು ಗ್ರಾಮದ ಫರಂಗಿಪೇಟೆ ಬಳಿ ನೇತ್ರಾವತಿ ನದಿಯಲ್ಲಿ ಆಧಾರ್ ಕಾರ್ಡ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಅಂಚೆ ಇಲಾಖೆಯ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.


ಅಂಚೆ ಇಲಾಖೆಯ ಮಂಗಳೂರು ದಕ್ಷಿಣ ವಿಭಾಗದ ನಿರೀಕ್ಷಕಿ ಸುಪ್ರಿಯಾ ಹಾಗೂ ಸಿಬ್ಬಂದಿಗಳು ಪುದು ಪಂಚಾಯತಿಗೆ ಭೇಟಿ ನೀಡಿ ಪಂಚಾಯತಿ ಅಧ್ಯಕ್ಷರು ಹಾಗೂ ಅಧಿಕಾರಿಗಳಿಂದ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಪುದು ಗ್ರಾಮದ ಹತ್ತನೇ ಮೈಲಿಕಲ್ಲು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಪುದು ಗ್ರಾಮಕ್ಕೆ ಸಂಬಂಧಪಟ್ಟ ನೂರಾರು ಆಧಾರ್ ಕಾರ್ಡ್ ಗಳು ಕಂತೆ ಕಂತೆಯಾಗಿ ತೇಲಿಬಂದಿತ್ತು. ಈ ಬಗ್ಗೆ ಮಾಹಿತಿ ಪಡೆದ ಪುದು ಗ್ರಾಮ ಪಂಚಾಯತಿ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಹಾಗೂ ಇತರ ಸದಸ್ಯರು ಸ್ಥಳಕ್ಕೆ ತೆರಳಿ ಬಳಿಕ ಕ್ಷೇತ್ರದ ಶಾಸಕ, ವಿಧಾನಸಭಾದ್ಯಕ್ಷ ಯು.ಟಿ.ಖಾದರ್ ಅವರಿಗೆ ತಿಳಿಸಿದ್ದು, ಯು.ಟಿ.ಖಾದರ್ ಅವರು ಈ ಬಗ್ಗೆ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ನಿಮ್ಮೂರಿನ ಯಾವುದೇ ಸುದ್ದಿ, ಮಾಹಿತಿಗಳಿದ್ದಲ್ಲಿ ಸಂಪರ್ಕಿಸಿ: +9190351 37252

LEAVE A REPLY

Please enter your comment!
Please enter your name here