ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಇದರ ಬಂಟ್ವಾಳ ತಾಲೂಕಿನ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ಜ್ಞಾನವಿಕಾಸ ಸೃಜನಶೀಲ ಕಾರ್ಯಕ್ರಮದ ಅಡಿಯಲ್ಲಿ ಕೇಂದ್ರದ ಸದಸ್ಯರು ಹಾಗೂ ಅವರ ಮನೆಯವರಿಗೆ, ಏಳು ದಿನಗಳ ಉಚಿತ ಮದುಮಗಳ ಶೃಂಗಾರ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಉದ್ಘಾಟಿಸಿದರು.
ಉದ್ಘಾಟನೆ ಬಳಿಕ ಮಾತನಾಡಿದ ಅವರು, ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷರಾದ ಹೇಮಾವತಿ ಹೆಗ್ಗಡೆಯವರ ಆಶಯದಂತೆ ಜ್ಞಾನವಿಕಾಸ ಕಾರ್ಯಕ್ರಮ ಆರ್ಥಿಕ, ಸಾಮಾಜಿಕ, ಸಬಲೀಕರಣದತ್ತ ಮಹಿಳೆಯರು ಮುಖ್ಯ ವಾಹಿನಿಗೆ ಬರಲು ಈ ಕಾರ್ಯಕ್ರಮ ತುಂಬಾ ಉಪಯುಕ್ತವಾದದ್ದು, ಏಳು ದಿನದ ಈ ತರಬೇತಿಯನ್ನು ಆಸಕ್ತಿಯಿಂದ ಪಡೆದುಕೊಳ್ಳುವಂತೆ ಅವರು ತಿಳಿಸಿದರು.

ಜ್ಞಾನವಿಕಾಸ ಯೋಜನಾಧಿಕಾರಿ ಮಲ್ಲಿಕಾ ಪ್ರಾಸ್ತವಿಕ ಮಾತನಾಡಿದರು. ಈ ಸಂದರ್ಭ ತಾಲೂಕಿನ ಯೋಜನಾಧಿಕಾರಿ ಜಯಾನಂದ ಪಿ. ಜನಜಾಗೃತಿ ಸದಸ್ಯರಾದ ಭಾರತೀ ಚೌಟ, ಸದಾನಂದ ಗೌಡ ನಾವೂರು, ತರಬೇತಿ ಶಿಕ್ಷಕಿಯಾದ ಶೋಭಾ ಉಪಸ್ಥಿತರಿದ್ದರು. ತಾಲೂಕಿನ ಜ್ಞಾನವಿಕಾಸ ಸಮನ್ವಯ ಅಧಿಕಾರಿ ಸವಿತಾ ಕಾರ್ಯಕ್ರಮ ನಿರ್ವಹಿಸಿದರು.








