ಬಂಟ್ವಾಳ: ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ಮಾ.26ರಿಂದ 28ರವರೆಗೆ ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಕಚೇರಿಯನ್ನು ಮಾ.20ರಂದು ಬಿ.ಸಿ ರೋಡ್ ನ ನ್ಯಾಯವಾದಿ ಉಮೇಶ್ ಕುಮಾರ್ ವೈ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿದ್ದ ದಕ್ಷಿಣ ಕನ್ನಡ ಶಾಮಿಯಾನ ಸಂಘದ ಅಧ್ಯಕ್ಷ ಕೆ.ವಿ. ಬಾಬು ದೀಪ ಬೆಳಗಿಸಿದರು. ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಹಾಗೂ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸ್ವಾಗತ ಸಮಿತಿಯ ಕಾರ್ಯದರ್ಶಿ ದೇವಪ್ಪ ಕುಲಾಲ್, ಕೋಶಾಧಿಕಾರಿ ಸುಭಾಶ್ಚಂದ್ರ ಜೈನ್, ಸಲಹೆಗಾರ ಸರಪಾಡಿ ಅಶೋಕ್ ಶೆಟ್ಟಿ, ಜಿಲ್ಲಾ ಕಸಾಪ ಕಾರ್ಯಕಾರಿ ಸಮಿತಿಯ ಸದಸ್ಯ ಪೂವಪ್ಪ ನೇರಳಕಟ್ಟೆ, ವಿಟ್ಲ ಹೋಬಳಿ ಕಸಾಪ ಅಧ್ಯಕ್ಷ ಗಣೇಶ ಪ್ರಸಾದ ಪಾಂಡೇಲು, ಉದಯ ವೆಂಕಟೇಶ ಭಟ್, ರಜನಿ ಚಿಕ್ಕಯಮಠ, ಕೀರ್ತಿ, ಆಶ್ಲೇಷ್ ಮತ್ತಿತರರು ಉಪಸ್ಥಿತರಿದ್ದರು.








