ಬಂಟ್ವಾಳ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಇಂದಿನಿಂದ ಮುಂದಿನ 3 ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ದ.ಕ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ಹಗಲು ಹೆಚ್ಚಿನ ತಾಪಮಾನದಿಂದ ಹೆಚ್ಚಿನ ಕೂಡಿದ್ದು, ಸಂಜೆ ವೇಳೆಗೆ ಮೋಡ ಕವಿದ ವಾತಾವರಣವಿರಲಿದೆ. ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಸಕಲೇಶಪುರ, ಮೂಡಿಗೆರೆ, ಶೃಂಗೇರಿ, ಆಗುಂಬೆ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.








