ಬಂಟ್ವಾಳ: ಕಾರವಾರ – ಮಂಗಳೂರು – ಬೆಂಗಳೂರು ಮಧ್ಯೆ ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕೆಲವು ಮಹಿಳೆಯರು ಸೇರಿ ಸಹಜ ಹೆರಿಗೆ ಮಾಡಿಸಿದ್ದು, ಬಂಟ್ವಾಳ ಸಮೀಪದ ಬಿ.ಸಿ.ರೋಡ್ ಬಳಿ ಘಟನೆ ನಡೆದಿದೆ.
ಮಂಗಳೂರು ಜಂಕ್ಷನ್‌ನಿಂದ ಹೊರಟ ರೈಲಿನಲ್ಲಿ ಮೈಸೂರು ಮೂಲದ ತುಂಬು ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿತ್ತು. ರೈಲು ಬಿ.ಸಿ.ರೋಡ್ ತಲುಪಿದಾಗ ಗರ್ಭಿಣಿಗೆ ತೀವ್ರ ರಕ್ತಸ್ರಾವವಾಗಿದ್ದು, ಈ ಹಿನ್ನೆಲೆಯಲ್ಲಿ ತಕ್ಷಣ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಯಿತು. 30 ನಿಮಿಷಗಳ ಕಾಲ ವೈದ್ಯರಿಗಾಗಿ ಕಾದಿದ್ದು, ಆದರೆ ಸಕಾಲಕ್ಕೆ ವೈದ್ಯಕೀಯ ಚಿಕಿತ್ಸೆ ಲಭಿಸದ ಕಾರಣ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕೆಲವು ಮಹಿಳೆಯರು ಕಾರ್ಯಪ್ರವೃತ್ತರಾಗಿ ಸಹಜ ಹೆರಿಗೆ ಮಾಡಿಸಿದರು ಎಂದು ತಿಳಿದು ಬಂದಿದೆ.








