ಪಿಯುಸಿಯಲ್ಲಿ ರ್‍ಯಾಂಕ್ ಪಡೆದ ವಿದ್ಯಾರ್ಥಿನಿಯರಿಗೆ ಕೃಷಿ ಪತ್ತಿನ ಸಹಕಾರ ಸಂಘದಿಂದ ಸನ್ಮಾನ

0

ಬಂಟ್ವಾಳ: 2025-26ನೇ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ರ್‍ಯಾಂಕ್ ಪಡೆದ ಸಂಘದ ಸದಸ್ಯರ ಮಕ್ಕಳನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು.

ಸಂಘದ ಸದಸ್ಯ ಡೊಂಬಯ ಡಿ. ಅರಳ ಇವರ ಮಗಳು ಜ್ಞಾನಶ್ರೀ ಆಳ್ವಾಸ್ ವಿದ್ಯಾ ಸಂಸ್ಥೆಯಲ್ಲಿ 600ಕ್ಕೆ 596 ಅಂಕ ಪಡೆದು ರಾಜ್ಯಕ್ಕೆ ನಾಲ್ಕನೇ ಸ್ಥಾನ, ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಮೂರನೇ ಸ್ಥಾನ ಹಾಗೂ ಬಂಟ್ವಾಳ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ನವೀನ ಶೆಟ್ಟಿ ಕರಿಂಕಿಜೆ ಇವರ ಮಗಳು ಕೃತ್ವಿ ಎನ್. ಶೆಟ್ಟಿ ರೋಟರಿ ಪದವಿ ಪೂರ್ವ ಕಾಲೇಜಿನಲ್ಲಿ 600ಕ್ಕೆ 590 ಅಂಕ ಪಡೆದು ರಾಜ್ಯದಲ್ಲಿ ಹತ್ತನೇ ಸ್ಥಾನ, ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇಬ್ಬರನ್ನೂ ಸಂಘದ ಆಡಳಿತ ಮಂಡಳಿಯಿಂದ ಅಭಿನಂದಿಸಲಾಯಿತು.

ಅಭಿನಂದಿಸಿ ಮಾತನಾಡಿದ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಸಂಘದ ಸದಸ್ಯರ ಮಕ್ಕಳು ಮಾಡಿದ ಶೈಕ್ಷಣಿಕ ಸಾಧನೆ ನಮ್ಮ ಸಂಘಕ್ಕೂ ಹೆಮ್ಮೆಯ ವಿಚಾರ. ಮುಂದಿನ ಶೈಕ್ಷಣಿಕ ವರ್ಷಗಳಲ್ಲಿಯೂ ಇದೇ ರೀತಿಯ ಪ್ರಗತಿಯೊಂದಿಗೆ ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸಂದೇಶ ಶೆಟ್ಟಿ ಪೊಡುಂಬ, ನಿರ್ದೇಶಕರಾದ ಸತೀಶ್ ಪೂಜಾರಿ ಅಲಕ್ಕೆ, ರಶ್ಮಿತ್ ಶೆಟ್ಟಿ, ದಿನೇಶ್ ಪೂಜಾರಿ, ಚಂದ್ರಶೇಖರ ಶೆಟ್ಟಿ, ವಿಶ್ವನಾಥ್ ಶೆಟ್ಟಿಗಾರ್, ಜಾರಪ್ಪ ನಾಯ್ಕ, ವೀರಪ್ಪ ಪರವ, ಎ. ಶಿವ ಗೌಡ, ಮಂದಾರತಿ ಎಸ್. ಶೆಟ್ಟಿ, ಪುಷ್ಪಲತಾ ಎಸ್.ಆರ್, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ನವೀನ ಹೆಗ್ಡೆ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ, ಪೋಷಕ ನವೀನ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರ್ವಹಿಸಿದರು.

ನಿಮ್ಮೂರಿನ ಯಾವುದೇ ಸುದ್ದಿ, ಮಾಹಿತಿಗಳಿದ್ದಲ್ಲಿ ಸಂಪರ್ಕಿಸಿ: +9190351 37252

LEAVE A REPLY

Please enter your comment!
Please enter your name here