ಬಂಟ್ವಾಳ: ಸರ್ಕಾರಿ ಪಾಲಿಟೆಕ್ನಿಕ್ ಬಂಟ್ವಾಳದಲ್ಲಿ 2026-27ನೇ ಸಾಲಿನ ಮೂರು ವರ್ಷದ ಡಿಪ್ಲೊಮಾ ಕೋರ್ಸುಗಳ ಆನ್ಲೈನ್ ಪ್ರವೇಶಾತಿ ಪ್ರಕ್ರಿಯೆ ಮುಗಿದಿದ್ದು, ಉಳಿದಿರುವ ಸೀಟುಗಳ ಭರ್ತಿಗಾಗಿ ಆಫ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಲಭ್ಯವಿರುವ ಕೋರ್ಸುಗಳು:
ಸಿವಿಲ್ ಇಂಜಿನಿಯರಿಂಗ್
ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್
ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್
ಮೆಕ್ಯಾನಿಕಲ್ ಇಂಜಿನಿಯರಿಂಗ್
ಅರ್ಹತೆ:
ಎಸ್ಎಸ್ಎಲ್ಸಿ (10ನೇ ತರಗತಿ) ಯಲ್ಲಿ ಕನಿಷ್ಠ 35% ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.







