ಪುತ್ತೂರು: ಕಾರಿನಲ್ಲಿ ನಿಷೇಧಿತ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಮಾಡಿದ ಬಂಟ್ವಾಳ ನಗರ ಠಾಣಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ರೂ.7.64ಲಕ್ಷ ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.
ಬಂಟ್ವಾಳ ಪುದು ಗ್ರಾಮದ ಮಾರಿಪಳ್ಳ ನಿವಾಸಿ ಎ,ಜುಬೈರ್ (39), ಬಂಟ್ವಾಳ ಬಿ ಮೂಡ ಗ್ರಾಮದ ತಾಳಿಪಡ್ಪು ಬಿ.ಎಂ ರಶೀದ್ ಯಾನೆ ಮಾರಿಮುತ್ತು(39ವ.) ಸಜಿಪ ಮುನ್ನೂರು ನಂದಾವರ ಎಚ್.ಟಿ ರೋಡ್ ನಿವಾಸಿ ಮೊಹಮ್ಮದ್ ಸವಾದ್ (36) ಬಂಧಿತ ಆರೋಪಿಗಳು.
ಬಂಧಿತರಿಂದ ಸಾಗಾಟಕ್ಕೆ ಬಳಸಲಾದ ರೂ.10 ಲಕ್ಷ ಮೌಲ್ಯದ ವಾಹನ, 3 ಮೊಬೈಲ್ಗಳು ಸೇರಿದಂತೆ ಒಟ್ಟು ರೂ.18ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರಡ್ಡಿ, ಇವರ ಮಾರ್ಗದರ್ಶನದಲ್ಲಿ ಬಂಟ್ವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ಕುಮಾರ್ ಶರ್ಮಾ ಅವರ ನೇತೃತ್ವದ ತಂಡದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಕೆ.ವಿ, ಬಂಟ್ವಾಳ ನಗರ ಠಾಣಾ ಪಿ.ಎಸ್.ಐ ಸಂದೀಪ್ ಶೆಟ್ಟಿ, ಹಾಗೂ ಸಿಬ್ಬಂದಿಗಳಾದ ಉದಯ ರೈ, ರಾಧಾಕೃಷ್ಣ ಕೆ, ಪ್ರವೀಣ್ ರೈ, ಸುರೇಶ್, ವಿವೇಕ್ ರೈ, ಆದರ್ಶ, ಅಜಯ್, ಸುರೇಶ್ ಉಪ್ಪಾರ್, ಸದಾಶಿವ, ಮಾಲಾಶ್ರೀ ಹಾಗೂ ಜಿಲ್ಲಾ ತಾಂತ್ರಿಕ ವಿಭಾಗದ ಸಂಪತ್, ದಿವಾಕರ್ ಕಾರ್ಯಾಚರಣೆಯಲ್ಲಿ ಸಹಕರಿಸಿರುತ್ತಾರೆ.








