ಬಂಟ್ವಾಳ: ಸರ್ಕಾರಿ ಪಾಲಿಟೆಕ್ನಿಕ್ ಬಂಟ್ವಾಳದಲ್ಲಿ ಡಿಪ್ಲೋಮಾ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷಕ್ಕೆ ನೇರ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪಿಯುಸಿ ವಿಜ್ಞಾನ ವಿಭಾಗ ಅಥವಾ 2 ವರ್ಷದ ಐಟಿಐ ಪಾಸ್ ಆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ತಮ್ಮ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಅರ್ಜಿಯನ್ನು ಕಾಲೇಜು ಕಚೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಜೂನ್ 2026. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಪಾಲಿಟೆಕ್ನಿಕ್ ಬಂಟ್ವಾಳ ಕಚೇರಿಯನ್ನು ಸಂಪರ್ಕಿಸಬಹುದು.








