ಪುತ್ತೂರು: ಜು.26ರಂದು ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆ ನಿವಾಸಿ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ರವರ ಉತ್ತರಕ್ರಿಯೆ ದಕ್ಷಿಣ ಕಾಶಿ ಎನಿಸಿದ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಸರಸ್ವತಿ ಸಭಾಂಗಣದಲ್ಲಿ ಆ.5ರಂದು ಜರಗಿತು.




ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ, ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಹಿಂದೂ ಪರ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ, ಉದ್ಯಮಿ ಜಯಂತ್ ನಡುಬೈಲ್, ಸುಧೀರ್ ಕುಮಾರ್ ಶೆಟ್ಟಿ, ಜಯರಾಮ್ ರೈ ಬಳಜ್ಜ, ಸೇರಿದಂತೆ ಹಲವು ಗಣ್ಯರು, ಕುಟುಂಬಸ್ಥರು ಭಾಗಿಯಾಗಿದ್ದರು.










