ಅರ್ಭಿ–ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ

0

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಹುಕಾಲದ ಬೇಡಿಕೆಯಾಗಿದ್ದ ಅರಳ ಗ್ರಾಮದ ಅರ್ಭಿ–ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ ನೀಡಲಾಯಿತು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರೂ.20 ಲಕ್ಷ ವಿಶೇಷ ಅನುದಾನ ಮಂಜೂರಾಗಿದ್ದು, ಕಾಮಗಾರಿಯನ್ನು ಮಾಜಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿದರು. ಗ್ರಾಮಸ್ಥರ ಬಹುಕಾಲದ ಬೇಡಿಕೆಗೆ ಸ್ಪಂದಿಸಿ ಈ ರಸ್ತೆ ಅಭಿವೃದ್ಧಿಗೆ ವಿಶೇಷ ಅನುದಾನ ಮಂಜೂರು ಮಾಡಿಸಿರುವುದು ಸ್ಥಳೀಯರಲ್ಲಿ ಸಂತಸ ಮೂಡಿಸಿದೆ. ಅನುದಾನ ಮಂಜೂರಾತಿಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿಶೇಷ ಆಸಕ್ತಿ ವಹಿಸಿದ್ದು, ಮಾಜಿ ಸಚಿವ ಬಿ. ರಮಾನಾಥ ರೈ ಸಹಕಾರ ನೀಡಿದ್ದರು.

ಅರ್ಭಿ–ದೆಂಬುಡೆ ರಸ್ತೆ ಕಾಂಕ್ರೀಟೀಕರಣದಿಂದ ಸ್ಥಳೀಯ ನಿವಾಸಿಗಳಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದ್ದು, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಇದು ಮಹತ್ವದ ಹೆಜ್ಜೆಯಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್, ಗ್ರಾ.ಪಂ. ಸದಸ್ಯರಾದ ದೇಜಪ್ಪ ಪೂಜಾರಿ, ನಳಿನಿ ನಾಯ್ಕ್, ಜಗದೀಶ್ ಕೊಯಿಲ, ಎಂ.ಬಿ. ಅಶ್ರಫ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್. ಅಂಚನ್, ಅರಳ ವಲಯ ಅಧ್ಯಕ್ಷ ಲತೀಫ್ ಸುಂಟಿಹಿಟ್ಲು, ಅಶ್ರಫ್ ಕುಟ್ಟಿಕಲ, ಸಂತೋಷ್ ಪಿಂಟೋ, ಸುರೇಶ್ ಜೋರ, ಅಶ್ರಫ್ ಮುಲ್ಲರಪಟ್ಟಣ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here