ಮಳೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

0

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜುಲೈ 2 ರಂದು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ (ಪಿಯುಸಿ) ಕಾಲೇಜುಗಳಿಗೆ ರಜೆ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here