ಪುತ್ತೂರು:ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದು ಬಳಿಕ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದ ಆರೋಪಿ ಶಫೀಕ್ ಬೆಳ್ಳಾರೆಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಹೆಚ್ಚಿನ ವಿಚಾರಣೆಗಾಗಿ ಎರಡನೆ ಅವಧಿಗೆ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದ ಶಫೀಕ್‌ರನ್ನು ಆ.೬ರ ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.ಈ ವೇಳೆ ನ್ಯಾಯಾಧೀಶರು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸವಣೂರಿನ ಝಾಕಿರ್, ಶಫೀಕ್, ಪಳ್ಳಿಮಜಲಿನ ಸದ್ದಾಂ ಮತ್ತು ಹ್ಯಾರೀಸ್ ಎಂಬವರನ್ನು ಬಂಧಿಸಿದ್ದರು.ಆರಂಭದಲ್ಲಿ ಶಫೀಕ್ ಮತ್ತು ಝಾಕಿರ್‌ರನ್ನು ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದರು.ಅವರ ವಿಚಾರಣೆ ಬಳಿಕ ಸದ್ದಾಂ ಮತ್ತು ಹ್ಯಾರೀಸ್‌ರನ್ನು ಬಂಧಿಸಲಾಗಿತ್ತು.ಬಂಧಿತ ನಾಲ್ವರ ಪೈಕಿ ಶಫೀಕ್‌ನನ್ನು ಪೊಲೀಸರು ಮತ್ತೆ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದರು.5 ದಿನಗಳ ಅವಧಿಗೆ ನ್ಯಾಯಾಲಯ ಆತನನ್ನು ಪೊಲೀಸರ ಕಸ್ಟಡಿಗೆ ನೀಡಿತ್ತು.ಪೊಲೀಸ್ ಕಸ್ಟಡಿ ಅವಧಿ ಮುಗಿದ ಬಳಿಕ ಆ.6ರಂದು ಆತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.ಇದೀಗ ಶಫೀಕ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.